Wednesday, May 31, 2023
spot_img
- Advertisement -spot_img

ಕಲಬುರಗಿ ಮಹಾನಗರ ಪಾಲಿಕೆ ಎಲೆಕ್ಷನ್ : ಗೆಲುವಿನ ನಗೆ ಬೀರಿದ ಬಿಜೆಪಿ

ಕಲಬುರಗಿ: 12 ವರ್ಷಗಳ ನಂತರ ಮತ್ತೆ ಬಿಜೆಪಿ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗದ್ದುಗೆ ಏರಿದೆ. ಪಾಲಿಕೆ ನೂತನ ಮೇಯರ್ ಆಗಿ ವಿಶಾಲ್ ದರ್ಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಅವರನ್ನು ಆಯ್ಕೆ ಮಾಡಲಾಗಿದ್ದು, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಬೆಂಬಲಿಗನಿಗೆ ಮೇಯರ್ ಪಟ್ಟ ಸಿಕ್ಕಿದೆ.

ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಇಂದು ನಡೆದ ಚುನಾವಣೆಗೆ ಹಾಜರಾದ 65 ಸದಸ್ಯರ ಪೈಕಿ, 33 ಮತಗಳು ಬಿಜೆಪಿಗೆ ಬಂದಿವೆ. ಜೆಡಿಎಸ್ ಬೆಂಬಲ ಸಿಕ್ಕರೂ ಕೂಡಾ ಕಾಂಗ್ರೆಸ್ 32 ಮತಗಳನ್ನು ಗಳಿಸಿ ಸೋಲು ಅನುಭವಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಕಮಲ ಅರಳಿದ್ದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದಾರೆ.

ವಿಶಾಲ್ ದರ್ಗಿ 33 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕಪನೂರ್ ಮತಗಳನ್ನು ಪಡೆದಿದ್ದಾರೆ. ಇನ್ನು ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ಶಿವಾನಂದ್ ಪಿಸ್ತಿ 33 ಮತಗಳನ್ನು ಪಡೆದರೆ ಕಾಂಗ್ರೆಸ್ ನ ವಿಜಯಲಕ್ಷ್ಮಿ 32 ಮತಗಳನ್ನು ಪಡೆದಿದ್ದಾರೆ.

Related Articles

- Advertisement -

Latest Articles