ಮಂಗಳೂರು: ಹೊಸ ಸರಕಾರ ಮುಂದಿನ 5 ವರ್ಷ ಹಿಂದೂಗಳ ಮೇಲೆ ಏನು ಮಾಡುತ್ತೆ ಅನ್ನೋದರ ಸ್ಯಾಂಪಲ್ ಇದು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಬಿಜೆಪಿ ನಾಯಕರ ಬ್ಯಾನರ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರನ್ನು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಹಿಂದೂ ಕಾರ್ಯಕರ್ತರ ಮೇಲೆ ಪ್ರಾಣಿಗಳಿಗಿಂತಲೂ ಕ್ರೂರವಾಗಿ ಹೊಡೆದಿದ್ದು, ಈ ಘಟನೆಗೆ ಮೂಲ ಕಾರಣವಾದ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು, ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾಗಿದೆ ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸೋಲನುಭವಿಸಿದ್ದು, ಹಿಂದು ಕಾರ್ಯಕರ್ತರು ಪುತ್ತೂರಿನ ಕೆಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿ.ವಿ. ಸದಾನಂದಗೌಡ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಬಗ್ಗೆ ಬಿಜೆಪಿ ಜಿಲ್ಲಾ ಘಟಕದ ಮುಖಂಡರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಈ ಪ್ರಕರಣದಡಿ 7 ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು ದೈಹಿಕವಾಗಿ ಸಾಕಷ್ಟು ಹಲ್ಲೆ ಮಾಡಿದ್ದರು.