ಬೆಂಗಳೂರು: ಕಾಂಗ್ರೆಸ್ ಅವಧಿಯ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ, ಈಗ ಹೆಚ್ಚು ಸಮಯ ಇಲ್ಲ,ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಬೇಕಿದೆ ಎಂದು ತಿಳಿಸಿದರು.
ಜಿಲ್ಲೆ, ಮತಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೇ ನಡದಿದ್ದು, ಜಿಲ್ಲಾ ಕಮಿಟಿ ರಚನೆ, ಮತಕ್ಷೇತ್ರದಲ್ಲಿ ಸಂಯೋಜಕರ ನೇಮಕ, ಪ್ರಚಾರ ವೈಖರಿ ಹೇಗಿರಬೇಕು ಎಂದು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಜೆಡಿಎಸ್ ಪಕ್ಷದಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ಕ್ಷೇತ್ರಗಳಿಗೆ ಅಭ್ಯರ್ಧಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ನಿಂದ ಮಾರ್ಚ್ 7ರಂದು ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದರು.