ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖಂಡರಾದ ಅತಿಶಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು , ಜನರು ಭ್ರಷ್ಟಾಚಾರದಿಂದ ಬೇಸತ್ತಿದ್ದು, ಬದಲಾವಣೆ ಬಯಸುತ್ತಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಹೋರಾಟ ನಡೆಸಲು ಪಕ್ಷ ನಿರ್ಧರಿಸಿರುವುದಾಗಿ ತಿಳಿಸಿದರು.
ಚುನಾವಣೆಯಲ್ಲಿ ಎಲ್ಲಾ 224 ಕ್ಷೇತ್ರಗಳಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ತನೆಲ್ಲಾ ಬಲದೊಂದಿಗೆ ಪಕ್ಷ ಹೋರಾಟ ನಡೆಸಲು ನಿರ್ಧರಿಸಿದೆ , ರಾಜ್ಯ ಬಿಜೆಪಿ ಸರ್ಕಾರದ ನಮ್ಮ ಕ್ಲಿನಿಕ್ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ 200 ಯೂನಿಟ್ ಉಚಿತ ವಿದ್ಯುತ್ ಭರವಸೆಗಳು ಎಎಪಿಯ ನಕಲು ಎಂದು ಆರೋಪಿಸಿದರು. ಅಲ್ಲದೇ ವಿಧಾನಸಭಾ ಚುನಾವಣೆಗಾಗಿ ಕಾರ್ಯಸೂಚಿಯನ್ನು ಪಕ್ಷ ತಯಾರಿಸುತ್ತಿದೆ ಎಂದರು.
ಪ್ರತಿಪಕ್ಷ ಕಾಂಗ್ರೆಸ್ ಘೋಷಿಸಿರುವ 200 ಯುನಿಟ್ ಉಚಿತ ವಿದ್ಯುತ್ ಯೋಜನೆ ಈಗಾಗಲೇ ದೆಹಲಿಯಲ್ಲಿ ಅನುಷ್ಠಾನಗೊಂಡಿದೆ , ‘10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ. ದೆಹಲಿ ಹಾಗೂ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದೆ. ಉತ್ತಮ ಆಡಳಿತವನ್ನೂ ನೀಡುತ್ತಿರುವುದರಿಂದ ಜನರ ವಿಶ್ವಾಸಗಳಿಸಿದೆ ಎಂದು ತಿಳಿಸಿದರು.