ಬೆಳಗಾವಿ: ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಲಡಾಯಿ ಶುರುವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಷ್ಯ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ಈಗಾಗಲೇ ಒಲಿದಿದೆ.
ಲಕ್ಷ್ಮಣ್ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಮಹಾಂತೇಶ ಕೌಜಲಗಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, 18 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ್ ಸವದಿ ಕಸರತ್ತು ನಡೆಸಿದ್ದಾರೆ. ಶಾಸಕ ಗಣೇಶ್ ಹುಕ್ಕೇರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ ಬೇಡಿಕೆ ಇಟ್ಟಿದ್ದಾರೆ. ಮಹಿಳಾ ಕೋಟಾದಡಿ ತಮಗೆ ಸಚಿವ ಸ್ಥಾನ ನೀಡುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಪಟ್ಟು ಹಿಡಿದಿದ್ದರೇ, ಎಂಎಲ್‌ಸಿ ಪ್ರಕಾಶ್ ಹುಕ್ಕೇರಿ ತಮಗೆ ಅಥವಾ ಸತತ ಮೂರು ಬಾರಿ ಚಿಕ್ಕೋಡಿ-ಸದಲಗಾದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಗಣೇಶ್ ಹುಕ್ಕೇರಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೇ 8 ಮಂತ್ರಿ ಆಯ್ಕೆಯಾಗಿದ್ದು, ಸಿದ್ದರಾಮಯ್ಯ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಕೊಡ್ತಾರ ಅನ್ನೋದು ಗೊತ್ತಾಗಬೇಕಿದೆ.