Thursday, June 8, 2023
spot_img
- Advertisement -spot_img

#BREAKING ವಿಧಾನಸಭಾ ಚುನಾವಣೆ: ಮೇ 10ಕ್ಕೆ ಮತದಾನ 13ಕ್ಕೆ ಫಲಿತಾಂಶ..!

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ10  ರಂದು ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಬರುವ ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ, 21 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು, ಏಪ್ರಿಲ್ ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಳ್ಳಲಿದೆ.

ರಾಜ್ಯದಲ್ಲಿ 5,21,73,579 ಜನ ಮತದಾರರಿದ್ದಾರೆ. 2,62,42,561 ಜನ ಪುರುಷ ಮತದಾರರು ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ. 80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗಾಗಿ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾಹಿತಿ ನೀಡಿದರು.

ವೇಳಾಪಟ್ಟಿ
ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ
ಏಪ್ರಿಲ್ 13ರಂದು ಅಧಿಸೂಚನೆ
ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ
ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನ
ಮೇ 10 ರಂದು ವಿಧಾನಸಭೆ ಚುನಾವಣೆ
ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ

Related Articles

- Advertisement -spot_img

Latest Articles