ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಆಗಲಿದೆ. ಚುನಾವಣಾ ಆಯೋಗ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ, ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ.
ಚುನಾವಣಾ ಆಯೋಗ ಇಂದು ಬೆಳಗ್ಗೆ 11. 30ಕ್ಕೆ ಮಹತ್ವದ ಸುದ್ದಿಗೋಷ್ಠಿ ನಡೆಸಿ, ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ ಮಾಡಲಿದೆ. ಇಂದು ವಿಧಾನಸಭೆ ಚುನಾವಣೆಯ ಡೇಟ್ ಫಿಕ್ಸ್ ಆಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಸಹ ಇಂದಿನಿಂದಲೇ ಆರಂಭವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ನೇತೃತ್ವದಲ್ಲಿ ಈ ಸುದ್ದಿಗೋಷ್ಠಿ ನಡೆಯಲಿದೆ.