Wednesday, November 29, 2023
spot_img
- Advertisement -spot_img

ಕರ್ನಾಟಕ ಬಂದ್: ಸಿಎಂ-ಡಿಸಿಎಂ, ಸ್ಟಾಲಿನ್ ಫೋಟೋಗೆ ರಕ್ತ ಚೆಲ್ಲಿ ಆಕ್ರೋಶ

ಹಾವೇರಿ : ಕಾವೇರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ಕರವೇ ನಾರಾಯಣ ಗೌಡ ಬಣದಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಕರವೇ ಕಾರ್ಯಕರ್ತರಿಂದ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ರಕ್ತ ಚೆಲ್ಲಿ ಪ್ರತಿಭಟನೆ ಮಾಡಲಾಗಿದೆ. ಕಾರ್ಯಕರ್ತರ ಕೈಯಿಂದ ರಕ್ತ ತೆಗೆದು ಭಾವಚಿತ್ರಗಳ ಮೇಲೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹಾಗು ಜೆಡಿಎಸ್ ಪಕ್ಷದಿಂದ ಜಂಟಿ ಹೋರಾಟ ನಡೆದಿದ್ದು, ಸಿಎಂ ಹಾಗೂ ಡಿಸಿಎಂ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದಲ್ಲದೇ ಕಾವೇರಿ ನಮ್ಮದು ಎಂದು ರಕ್ತದಲ್ಲಿ ಬರೆದ ಪ್ರತಿಭಟನಾಕಾರರು ಸರ್ಕಾರ ವಿರುದ್ಧ ಘೋಷಣೆ ಕೂಗಿದ್ದಾರೆ.

ಅಷ್ಟೇ ಅಲ್ಲದೇ ರಾಮನಗರದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ರಕ್ತ ಚೆಲ್ಲಿ ಸರ್ಕಾರದ ವಿರುದ್ಧ ಆಕ್ರೋಶಿಸಲಾಗಿದೆ. ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರಿಂದ ರಕ್ತ ಚೆಲ್ಲಿ ಪ್ರತಿಭಟನೆ ನಡೆದಿದ್ದು, ಸಿರಿಂಜ್ ಮೂಲಕ ರಕ್ತ ತೆಗದು ರಸ್ತೆಗೆ ರಕ್ತ ಚೆಲ್ಲಿದ ಪ್ರತಿಭಟನಾಕಾರರು ರಕ್ತ ಕೊಟ್ಟೆವೂ ನೀರು ಕೊಡೆವು ಎಂದು ಘೋಷಣೆ ಕೂಗಿದ್ದಾರೆ.

ಇನ್ನೂ ಹುಬ್ಬಳ್ಳಿ ಚನ್ನಮ್ಮ ವೃತ್ತದಲ್ಲಿ ಕಾವೇರಿಗಾಗಿ ಪ್ರತಿಭಟನೆಕಾರು ಧರಣಿ ಕುಳಿತಿದ್ದು, ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದಾರೆ. ನಮ್ಮ ಕರ್ನಾಟಕ ಸೇನೆಯಿಂದ ಚನ್ನಮ್ಮ ವೃತ್ತದಲ್ಲಿ ಧರಣಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ,ಡಿಕೆ ಶಿವಕುಮಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ದ ಘೋಷಣೆ ಕೂಗಿ ಆಕ್ರೋಶಿಸಲಾಗಿದೆ.

ಚನ್ನಮ್ಮ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ. ಇನ್ನೂ ಧಾರವಾಡದಲ್ಲಿ ಕಾವೇರಿ ವಿಷಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 15 ಕ್ಕೂ ಹೆಚ್ಚು ಪ್ರತಿಭಟನಾಕಾರರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಂದ್‌ಗೆ ಸ್ಯಾಂಡಲ್‌ವುಡ್ ಬೆಂಬಲ; ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ

ಧಾರವಾಡದ ಜ್ಯೂಬಿಲಿ ವೃತ್ತದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದ ಜಯಕರ್ನಾಟಕ ಸಂಘಟನೆ ‌ಜಿಲ್ಲಾಧ್ಯಕ್ಷ ಸುಧೀರ ಮುಧೋಳ ಹಾಗೂ ರಾಜ್ಯ ರೈತ ಸೇನೆ ಶಂಕರ ಅಂಬಲಿ ಹಾಗೂ ಇತರೆ ಹೋರಾಟಗಾರರನ್ನು ಬಂಧಿಸಲಾಗಿದೆ.

ರಾಜ್ಯ ಸರ್ಕಾರ ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶಿಸಿದ್ದಾರೆ. ಇನ್ನೂ ಬಳ್ಳಾರಿಯಲ್ಲಿ ಕರ್ನಾಟಕ ಬಂದ್ ಇಲ್ಲ..ಎಂದಿನಂತೆ ಜನಜೀವನ ನಡೆಯುತ್ತಿದೆ.. ಆಟೋ ಬಸ್ ಓಡಾಟ ನಡೆಯುತ್ತಿದ್ದು, ಯಾವುದೇ ರೀತಿಯ ಪೊಲೀಸ್ ಬಂದೋಬಸ್ತ್ ಕೂಡ ಇಲ್ಲ .

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles