ಬೆಂಗಳೂರು : ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿವೆ ಎಂದು ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ, ಮೈತ್ರಿಯಲ್ಲಿ ನಾಲ್ಕು ಕ್ಷೇತ್ರಗಳನ್ನು ಮಾತ್ರ ಹಂಚಿಕೆ ಮಾಡಿಕೊಳ್ಳಲಾಗುತ್ತಿದೆ. ಹಾಗುದ್ರೆ, ಆ ನಾಲ್ಕು ಕ್ಷೇತ್ರಗಳು ಯಾವವು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಮಂಡ್ಯ ಜೆಡಿಎಸ್‌ಗೆ ಬಿಟ್ಟು ಕೊಡಲು ಒಪ್ಪಿಗೆ ಸೂಚಿಸಿದೆ ಎಂಬ ಉನ್ನತ ಮೂಲಗಳ ಮಾಹಿತಿ ನೀಡಿದೆ. ಇದರ ಜೊತೆಗೆ ಕೋಲಾರ, ತುಮಕೂರು, ಹಾಸನ , ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಜೆಡಿಎಸ್ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಆದರೆ ದಳಪತಿಗಳ ಬೇಡಿಕೆ ಇಟ್ಟಿದ್ದ ಕ್ಷೇತ್ರದಲ್ಲಿ ಪ್ರಾಥಮಿಕ ಹಂತವಾಗಿ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಉಪಸಮರದಲ್ಲಿ ಮೈತ್ರಿಕೂಟಕ್ಕೆ ಮೇಲುಗೈ; ಬಿಜೆಪಿ 3, I.N.D.I.A 4 ಕಡೆ ಗೆಲುವು!
ಕಳೆದ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿದ್ದರು. ಜೆಡಿಎಸ್ ನ ಪ್ರಮುಖ ಟಾರ್ಗೆಟ್ ಮಂಡ್ಯವೇ ಆಗಿದೆ. ಶತಾಯಗತಾಯ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ಹಾಕಿಕೊಳ್ಳಲು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಯತ್ನ ನಡೆಸಿದ್ದರು. ಹಾಗಾಗಿ ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಬೆಳವಣಿಗೆ ನಂತರ ಹೀಗಾಗಿ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪಕ್ಕಾ ಆಗಿದೆ. ಹಾಗಾದರೆ ಬಿಜೆಪಿಗೆ ಬೆಂಬಲ ಸೂಚಿಸಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ಭವಿಷ್ಯ ಏನು ಎಂಬ ಬಗ್ಗೆ ಚರ್ಚೆ ಆರಂಭವಾಗಿದೆ.
ಇದನ್ನೂ ಓದಿ: ʼಕಾಂಗ್ರೆಸ್‌ನವ್ರು ಗ್ಯಾರಂಟಿಗೋಸ್ಕರ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದಾರೆʼ
ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಮೂಲಕ ಉಭಯ ಪಕ್ಷಗಳು ಮಹಾಮೈತ್ರಿಗೆ ಮುಂದಾಗಿದೆ. ಸುಮಲತಾ ಪಕ್ಷೇತರರಾಗಿ ನಿಂತು ಗೆದ್ದು ಬಂದವರು. ಆದರೆ ಬಿಜೆಪಿಗೆ ತನ್ನ ಬೆಂಬಲವಿದೆ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಹೀಗಾಗಿ ಮುಂಬರುವ ಲೋಕಾ ಚುನಾವಣೆಯಲ್ಲಿ ಸುಮಲತಾ ಅವರು ಮಂಡ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೆಂದೇ ಹೇಳಲಾಗಿತ್ತು. ಆದರೆ ಈಗ ಸುಮಲತಾ ತನ್ನ ಕ್ಷೇತ್ರವಾದ ಮಂಡ್ಯದಿಂದ ಪಕ್ಷೇತರರಾಗಿಯೇ ಕಣಕ್ಕಿಳಿಯುತ್ತಾರಾ? ಅಥವಾ ಬೇರೆ ಕ್ಷೇತ್ರದಿಂದ ಬಿಜೆಪಿ ಸುಮಲತಾ ಅವರನ್ನು ಕಣಕ್ಕಿಳಿಸಲಿದೆಯೇ ಎಂಬುದನ್ನು ಕಾದುಯ ನೋಡಬೇಕಿದೆ. ಸೆ.10ರ ಜೆಡಿಎಸ್-ಬಿಜೆಪಿ ಮತ್ತೊಂದು ಸಭೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.