ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗಿದ್ದು ಸಂಪುಟ ರಚನೆಯಾಗಿದೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಹೆಚ್ ಕೆ ಪಾಟೀಲ್, ಕೃಷ್ಣಬೈರೇಗೌಡ, ಎನ್ ಚೆಲುವರಾಯಸ್ವಾಮಿ, ಕೆ ವೆಂಕಟೇಶ್, ಡಾ ಹೆಚ್. ಸಿ.ಮಹದೇವಪ್ಪ ಈಶ್ವರ್ ಖಂಡ್ರೆ, ಕೆ ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್.ಬಿ. ತಿಮ್ಮಾಪುರ್, ಎಸ್ ಎಸ್ ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ ಎಂ. ಸಿ.ಸುಧಾಕರ್ ಸೇರಿದಂತೆ ಹಲವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮೊದಲ ಬಾರಿಗೆ ಸಚಿವರಾಗಿ ಕೆ.ವೆಂಕಟೇಶ್, ಮಧುಗಿರಿ ವಿಧಾನಸಭಾ ಕ್ಷೇತ್ರದ ಕ್ಯಾತಸಂದ್ರ ನಂಜಪ್ಪ ರಾಜಣ್ಣ, ಭಟ್ಕಳ ವಿಧಾನಸಭಾ ಕ್ಷೇತ್ರದ ಮಾಂಕಾಳ ವೈದ್ಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲಕ್ಷೀ ಹೆಬ್ಬಾಳ್ಕರ್, ರಾಯಚೂರು ಜಿಲ್ಲೆಯ ಕಾಂಗ್ರೆಸ್ ಮುಖಂಡ ಎನ್ ಎಸ್ ಬೋಸರಾಜು, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬೈರತಿ ಸುರೇಶ್, ಸೊರಬ ವಿಧಾನಸಭಾ ಕ್ಷೇತ್ರದ ಮಧು ಬಂಗಾರಪ್ಪ, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಂ ಸಿ ಸುಧಾಕರ್ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿ ನಾಗೇಂದ್ರ ಪ್ರಮಾಣ ವಚನ ಸ್ವೀಕರಿಸಿದರು. ಅಷ್ಟೇ ಅಲ್ಲದೇ ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರದ ಪ್ರಮುಖ ಕ್ಷಣಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಎಲ್ಲ ನೂತನ ಸದಸ್ಯರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ,