Monday, March 27, 2023
spot_img
- Advertisement -spot_img

ಶೀಘ್ರದಲ್ಲೇ ಸಂಪುಟ ವಿಸ್ತರಣೆ, ಹೊಸ ಮುಖಗಳಿಗೆ ಅವಕಾಶ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಂದ್ರದ ನಾಯಕರೊಂದಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಲು ಸಮಯ ಕೇಳಿದ್ದು, ಶೀಘ್ರದಲ್ಲಿಯೇ ಭೇಟಿಗೆ ಸಮಯ ನಿಗದಿಯಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಆರು ತಿಂಗಳಷ್ಟೇ ಬಾಕಿ ಉಳಿದಿದ್ದು, ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪಕ್ಷದ ಹೈಕಮಾಂಡ್‌ ನಿಂದ ಗ್ರೀನ್ ಸಿಗ್ನಲ್ ಬಂದ ತಕ್ಷಣ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಸಂಪುಟದಲ್ಲಿ ಈಗಾಗಲೇ ಕೆಲ ಜಿಲ್ಲೆಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದ್ದು, ಈ ಬಾರಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಲ್ಲಿ ಇನ್ನೂ ಕೆಲ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ. ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಹೆಚ್ಚಿನ ಕಾರ್ಯ ನಿರ್ವಹಿಸುವ ಅಗತ್ಯವಿದ್ದು, ಈ ಬಾರಿ ಸಂಪುಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಚಿವರನ್ನು ಸೇರ್ಪಡೆಗೊಳಿಸುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದೆ ಎನ್ನಲಾಗಿದೆ.

ಈ ಬಾರಿಯ ಸಂಪುಟ ವಿಸ್ತರಣೆ ವೇಳೆ ಕಾರ್ಯನಿರ್ವಹಿಸದ ಕೆಲ ಸಚಿವರನ್ನು ಕೈಬಿಡಲು ಚಿಂತನೆ ನಡೆಸಲಾಗಿದ್ದು, ಯಡಿಯೂರಪ್ಪ ಅವರು ತಮ್ಮ ನಿಷ್ಠಾವಂತರಿಗೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಗಳನ್ನು ಮಾಡುತ್ತಿದ್ದು, ಈ ಪಟ್ಟಿಯಲ್ಲಿ ಬಿ.ಎಲ್.ಸಂತೋಷ್ ಇದ್ದಾರೆನ್ನಲಾಗಿದೆ. ಅಷ್ಟೇ ಅಲ್ಲದೇ 10-11 ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಹೈಕಮಾಂಡ್ ಯಾವಾಗ ಪಟ್ಟಿಗೆ ಒಪ್ಪಿಗೆ ನೀಡುತ್ತದೆ ಎಂಬುದು ಇನ್ನೂ ಖಚಿತವಾಗಿಲ್ಲ.

Related Articles

- Advertisement -

Latest Articles