ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಇದೀಗ ಮಾಜಿ ಸಚಿವ ಕೆ.ಎನ್ ರಾಜಣ್ಣ ಸಿಎಂ ಬದಲಾವಣೆ ಕುರಿತು ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ. ಸಂಪುಟ ಪುನರ್ ರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ ಅವರು, ಸಂಪುಟ ಪುನರ್ ರಚನೆ ಮೇಲೆ ಬದಲಾವಣೆ ಭವಿಷ್ಯ ನಿರ್ಧಾರವಾಗಲಿದೆ. ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರೇ ಐದು ವರ್ಷವೂ ಸಿಎಂ ಆಗಿರಲಿದ್ದಾರೆ. ಬಿಹಾರ ಚುನಾವಣೆ ಬಳಿಕ ಬದಲಾವಣೆ ಆಗುತ್ತೆ ಈಗಾಗಲೇ ಈ ವಿಚಾರದ ಕುರಿತು ಮಾತುಕತೆ ಆಗಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.