ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕೆಲ ತಿಂಗಳಿದ್ದರೂ ಈಗಲೇ ಜೆಡಿಎಸ್ 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಮಾಜಿಸಿಎಂ ಹೆಚ್ ಡಿಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ನಂತರ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.
ಎಲ್ಲರ ಜೊತೆ ಚರ್ಚೆ ಮಾಡಿದಾಗ 116 ಜನರ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮೊದಲನೆ ಹಂತದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಮೈ ಮರೆತರೆ ಪಟ್ಟಿ ಬದಲಾಯಿಸುತ್ತೇವೆ ಎಂದು ಹೇಳಿದರು. ವರಿಷ್ಟರಾದ ಎಚ್ ಡಿ ದೇವೇಗೌಡರು ಇದ್ರ ಬಗ್ಗೆ ಖಡಾಖಂಡಿತವಾಗಿ ಸೂಚಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು ಈ ಎಲ್ಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮುನ್ನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಅನುಮತಿಯನ್ನೂ ಪಡೆಯಲಾಗಿದೆ ಎಂದು ಹೇಳಿದರು.
ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಟ್ಟಿದ್ದಾರೆ.