Monday, December 4, 2023
spot_img
- Advertisement -spot_img

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್, 68 ಸಾವಿರ ರೂ. ದಂಡ

ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ.

ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68 ಸಾವಿರ ರೂ. ದಂಡ ಪಾವತಿಸುವಂತೆ ಸೂಚಿಸಿದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಎಫ್‌ಐಆರ್‌ ದಾಖಲು

ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ. ತನಗೆ ತಿಳಿಯದಂತೆ ಕಂಬದಿಂದ ಪವರ್ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.

ಮನೆ ಅಲಂಕರಿಸುವ ಕೆಲಸವನ್ನು ಗುತ್ತಿಗೆದಾರನಿಗೆ ನೀಡಲಾಗಿತ್ತ, ಅವರು ತಮ್ಮ ಅಥವಾ ಅವರ ಕುಟುಂಬ ಸದಸ್ಯರಿಗೆ ತಿಳಿಯದೆ ಕಂಬದಿಂದ ವಿದ್ಯುತ್ ಪಡೆದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಅವರ ಗಮನಕ್ಕೆ ತಂದ ತಕ್ಷಣ ವಿದ್ಯುತ್ ಸಂಪರ್ಕವನ್ನು ತೆಗೆದುಹಾಕಲಾಯಿತು. ಈ ಘಟನೆ ನಡೆದಾಗ ತಾವು ಬೆಂಗಳೂರಿನಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಸಿಐಡಿ ವಶಕ್ಕೆ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles