Wednesday, March 22, 2023
spot_img
- Advertisement -spot_img

ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ : ಕಂದಾಯ ಸಚಿವ ಆರ್​. ಅಶೋಕ

ಬೆಳಗಾವಿ: ಹೊಸ ವರ್ಷಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್​. ಅಶೋಕ ಹೇಳಿದ್ದಾರೆ.

ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಆರ್ ಅಶೋಕ್ ಮತ್ತು ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು , ತಜ್ಞರ ಸಭೆ ನಡೆಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡುವವರು ಕೂಡ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ನಗರಗಳಿಗೆ ಈ ನಿಯಮ ಅನ್ವಯವಾಗುತ್ತದೆ ಎಂದರು.

ಬಾರ್ , ಪಬ್ ಹಾಗೂ ಹೊಟೇಲ್​ಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು ಎಷ್ಟು ಟೇಬಲ್ ಇದೆಯೋ ಅಷ್ಟು ಚೇರ್​ಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. ಇನ್ನೂ ಹೆಚ್ಚಾಗಿ ಜನ ಒಂದೇ ಕಡೆ ಸೇರುವ ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲೂ ನಿಯಮ ಪಾಲನೆ ಕಡ್ಡಾಯಗೊಳಿಸಲಾಗಿದೆ.

ಚಿತ್ರಮಂದಿರ​ಗಳಲ್ಲಿ ಮಾಸ್ಕ್ ಕಡ್ಡಾಯ. ಶಾಲಾ-ಕಾಲೇಜ್​ನ ತರಗತಿಗಳಿಗೆ ವಿದ್ಯಾರ್ಥಿಗಳು ಪ್ರವೇಶಕ್ಕೂ ಮುಂಚೆ ಸ್ಯಾನಿಟೈಸ್​ ಮಾಡುವುದು, ಮಾಸ್ಕ್​ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್​ ಧರಿಸುವುದು ಕಡ್ಡಾಯ ಮಾಡಿದ್ದಾರೆ.

Related Articles

- Advertisement -

Latest Articles