ಬೆಂಗಳೂರು : ರಾಜ್ಯ ಸರ್ಕಾರದ ಶಕ್ತಿ ಯೋಜನೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರ್ಪಡೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಹಂಚಿಕೊಂಡದ್ದ ಪ್ರಮಾಣಪತ್ರ ಇದೀಗ ಅಪಹಾಸ್ಯಕ್ಕೆ ಕಾರಣವಾಗಿದ್ದು, ವಿಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿವೆ.
ಇದನ್ನೂ ಓದಿ : ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಹಾಗೂ KSRTC: ಸಿದ್ದು ಸಂತಸ
ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ ತಮ್ಮ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಪ್ರಮಾಣ ಪತ್ರವನ್ನು ಹಂಚಿಕೊಂಡಿದ್ದರು. ಆದರೆ ಇದು ನಕಲಿ ಎಂದು ಬಿಜೆಪಿ ಆರೋಪಿಸಿದ್ದು, ಈ ಬಗ್ಗೆ, ಸಿಎಂ ಕಚೇರಿ ಈಗ ಪರಿಶೀಲಿಸುತ್ತಿದೆ.
ಮೂರು ದಿನಗಳ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ವಾಸಿಸುವ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಸುಗಮಗೊಳಿಸುವ ತಮ್ಮ ಸರ್ಕಾರದ ಶಕ್ತಿ ಯೋಜನೆಯ ಮೂಲಕ ಅತಿ ಹೆಚ್ಚು ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕಾಗಿ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದೆ ಎಂದು ಪ್ರಮಾಣ ಪತ್ರ ಹಂಚಿಕೊಂಡಿದ್ದರು.

ಸದ್ಯ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಹೇಳಿದಂತೆ ಈ ಪ್ರಮಾಣ ಪತ್ರವು ನಕಲಿ ಎಂದು ಈಗ ತಿಳಿದುಬಂದಿದೆ. ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಲಿಮಿಟೆಡ್ ಅನ್ನು ಜುಲೈ 15, 2025 ರಂದೇ ಮುಚ್ಚಲಾಯಿತು ಎಂದು ಜೆಡಿಎಸ್ ಹೇಳಿಕೊಂಡಿದೆ. ಈ ಪ್ರಮಾಣಪತ್ರ ನಕಲಿ ಮಾತ್ರವಲ್ಲ. ಅದರ ದರಪಟ್ಟಿಯೂ ಇದೆ! ನೀವು ಎಷ್ಟು ಕೆಳಮಟ್ಟಕ್ಕೆ ಹೋಗಿ ಜನರನ್ನು ಮರುಳು ಮಾಡಲು ಈ ಅಗ್ಗದ ತಂತ್ರಗಳನ್ನು ಮಾಡುತ್ತೀದಿರಿ ಎಂದು ಸಿಟಿ ರವಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.