ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದಷ್ಟೇ ನೀರು ಹರಿಸಬೇಕೆಂದು ಇಂದು ನಡೆದ ಸಭೆಯಲ್ಲಿ ತೀರ್ಮಾನವಾಗಿದೆ. ಇದರಿಂದ ಕರ್ನಾಟಕ ಕಾವೇರಿ ವಿಚಾರದಲ್ಲಿ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.
ಸಭೆಯಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲ್ಲ ಆಗಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಪಟ್ಟು ಹಿಡಿದರು. ಮತ್ತೊಂದೆಡೆ ತಮಿಳುನಾಡು ಕೂಡ ಯಾವ ಮಾನದಂಡದ ಮೇಲೆ ನೀರು ಹರಿಸಲು ಸಾಧ್ಯವಿಲ್ಲ ಎನ್ನುತ್ತಿದ್ದೀರಿ? ಎಂದು ಪ್ರಶ್ನೆ ಮುಂದಿಟ್ಟರು. ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದಷ್ಟೆ ತಮಿಳುನಾಡಿಗೆ ನೀರು ಬಿಡಬೇಕೆಂದು ಹೇಳಿದೆ.
ಇದನ್ನೂ ಓದಿ: ‘ಇದು ಪ್ರಧಾನಿಯವರ ಐತಿಹಾಸಿಕ ನಿರ್ಧಾರ’; LPG ದರ ಇಳಿಕೆಗೆ ಬಿಜೆಪಿ ನಾಯಕರ ಬಹುಪರಾಕ್!
ತಮಿಳುನಾಡಿಗೆ ಪ್ರತಿದಿನವೂ 5000 ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕೊನೆಗೂ ಇಂದಿನ ಸಭೆಯಲ್ಲೂ ರಾಜ್ಯಕ್ಕೆ ನಿರಾಸೆಯಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.