ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಕರ್ನಾಟಕಕ್ಕೆ ತುಂಬಾ ಖುಷಿ ತಂದಿದೆ. ನಾವು ಇಂದು ಸಭೆ ನಡೆಸಿದ್ದೇವೆ ಮತ್ತು ಅವರನ್ನು ಮೊದಲು ಕರ್ನಾಟಕಕ್ಕೆ ಬರಲು ಆಹ್ವಾನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗಾಗಿ ಕರ್ನಾಟಕದಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲು ಬಯಸುತ್ತೇವೆ ,ಅಂತೆಯೇ ಅವರಿಗಾಗಿ ನಾವು ಭವ್ಯವಾದ ಸ್ವಾಗತವನ್ನು ಆಯೋಜಿಸಲು ಬಯಸುತ್ತೇವೆ. ಅವರ ಆಗಮನದಿಂದ ಪಕ್ಷವನ್ನು ಹುರಿದುಂಬಿಸಲಾಗುವುದು ಎಂದರು.ಸದ್ಯ ಎಐಸಿಸಿ ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಪಟ್ಟಗಿಟ್ಟಿಸಿಕೊಂಡಿದ್ದಾರೆ. 7,897 ಮತಗಳನ್ನ ಮಲ್ಲಿಕಾರ್ಜುನ ಖರ್ಗೆ ಪಡೆದಿದ್ದು, 1,072 ಮತಗಳನ್ನ ಪಡೆದ ‘ಕೈ’ ನಾಯಕ ಶಶಿ ತರೂರ್ ಪಡೆದುಕೊಂಡಿದ್ದಾರೆ. ದೇಶವು ಹೊಸ ಮುಖವನ್ನು ಹುಡುಕುತ್ತಿದೆ. ಅವರ ಜೊತೆ ನಾವಿದ್ದೇವೆ ಮಲ್ಲಿಕಾರ್ಜುನ ಖರ್ಗೆ ಪಕ್ಷಕ್ಕಾಗಿ 50 ವರ್ಷ ಸೇವೆ ಸಲ್ಲಿಸಿದ್ದಾರೆ.
ಪಕ್ಷ ವಹಿಸಿದ ಎಲ್ಲಾ ಹುದ್ದೆಗಳನ್ನು ಜವಾಬ್ದಾರಿಯಾಗಿ ನಿಭಾಯಿಸಿದ್ದಾರೆ. ಪಕ್ಷನಿಷ್ಠೆ, ತ್ಯಾಗ, ಹೋರಾಟದ ಛಲ ಇದ್ದರೆ ಒಳ್ಳೆ ಅವಕಾಶ ಸಿಗುತ್ತೆ. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರೇ ಸಾಕ್ಷಿ ಎಂದು ಹೇಳಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅ 17ರಂದು ಮತದಾನ ನಡೆದಿತ್ತು. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅಧ್ಯಕ್ಷ ಗಾದಿಗೆ ಸ್ಪರ್ಧಿಸಿದ್ದರು.