ಬೆಂಗಳೂರು : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಘೋಷಣೆ ಮಾಡಿದ್ದು, ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5,300 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸತಸ ವ್ಯಕ್ತಪಡಿಸಿದ್ದಾರೆ.
ಈ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು.” ಎಂದು ಟ್ವೀಟ್ ಮಾಡಿದ್ದಾರೆ.
ಈ ಯೋಜನೆಯಿಂದ ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ನೀರಾವರಿಗೆ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಈ ಯೋಜನೆ ಬಹಳ ಪ್ರಮುಖವಾಗಿದೆ. ಇಷ್ಟು ದೊಡ್ಡ ಪ್ರಮಾಣದ ಅನುದಾನ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಬಜೆಟ್‌ನಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ. ಇದು ಭರವಸೆಗಳಿಂದ ತುಂಬಿರುತ್ತದೆ. ಆದರೆ ಯಾವುದನ್ನೂ ಈಡೇರಿಸುವುದಿಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಬಜೆಟ್‌ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದೆ ಬಿಜೆಪಿ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದರು.
ಈ ಬಾರಿ ಕೂಡ ದೂರದೃಷ್ಟಿ, ದೇಶದ ಹಿತದೃಷ್ಟಿಯುಳ್ಳ ಬಜೆಟ್ ಮಂಡಿಸಿದ್ದಾರೆ. ಇದು ಯವ ಸಮುದಾಯ, ಮೂಲಸೌಕರ್ಯ, ಪರಿಸರ ಸ್ನೇಹಿ ಬಜೆಟ್ ಆಗಿದೆ. ಆದಾಯ ತೆರಿಗೆ ರಿಯಾಯಿತಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ನೀಡಲಾಗಿದೆ. ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದ್ದು, ಪ್ರಧಾನ ಮಂತ್ರಿಗಳಿಗೆ, ಕೇಂದ್ರ ಹಣಕಾಸಿನ ಖಾತೆ ಸಚಿವೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡಲಾಗಿದೆ. ವೈದ್ಯಕೀಯ ಕ್ಷೇತ್ರ ಹಾಗೂ ನರ್ಸಿಂಗ್ ಕಾಲೇಜುಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ರಸ್ತೆ, ರೈಲ್ವೆ ವಲಯದ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದರಿಂದ ರಾಜ್ಯಕ್ಕೂ ಅನುಕೂಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.