ಬೆಂಗಳೂರು: ನೂತನ ಪರಿಷತ್ ಸದಸ್ಯರಾದ ಉಮಾಶ್ರೀ, ಎಂ.ಆರ್.ಸೀತಾರಾಮ್ ಹಾಗೂ ಸುಧಾಮ್ ದಾಸ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಸಚಿವ ಹೆಚ್.ಕೆ.ಪಾಟೀಲ್, ಸೇರಿ ಪರಿಷತ್ ನ ಹಲವಾರು ಸದಸ್ಯರ, ಶಾಸಕರು ಭಾಗಿಯಾಗಿದ್ದರು. ಸಂವಿಧಾನ ಹಾಗೂ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ : ‘ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ’
ವಿಧಾನ ಪರಿಷತ್‌ಗೆ ನೂತನವಾಗಿ ನಾಮನಿರ್ದೇಶನಗೊಂಡಿರುವ ಎಂ.ಆರ್ ಸೀತಾರಾಂ, ಉಮಾಶ್ರೀ ಮತ್ತು ಸುಧಾಮ್ ದಾಸ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಪಾಲ್ಗೊಂಡು, ಶುಭ ಕೋರಿದರು.
ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ನೂತನ ಪರಿಷತ್ ಸದಸ್ಯ ಸುಧಾಮ್ ದಾಸ್, ಬಹಳ ಸಂತೋಷ ಆಗ್ತಿದೆ. ನನ್ನ ಮೇಲೆ ಭರವಸೆ ಇಟ್ಟು ಪಕ್ಷ ಆಯ್ಕೆ ಮಾಡಿದೆ. ಇದು ಗುರುತರವಾದ ಜವಬ್ದಾರಿ ಅಂತ ಪರಿಗಣಿಸಿದ್ದೇನೆ. ಉನ್ನತ ವ್ಯಕ್ತಿಗಳು ಅಲಂಕರಿಸಿದ ಸ್ಥಾನದಲ್ಲಿ ನನಗೆ ಅವಕಾಶ ಸಿಕ್ಕಿದೆ. ಈ ಸ್ಥಾನಕ್ಕೆ ಸಂಪೂರ್ಣವಾಗಿ ನ್ಯಾಯ ಒದಗಿಸುತ್ತೇನೆ. ಸರ್ಕಾರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ ಇಲ್ಲಿ ಉಪಯೋಗಿಸಿಕೊಳ್ಳುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ! ಬಿ ಎಲ್ ಸಂತೋಷ್ ಸಭೆಗೆ ಹಲವರು ಗೈರು
ಕೆಲ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇದು ಸಹಜ ಅಲ್ವಾ. ಖಂಡಿತ ಈಗ ಎಲ್ಲರೂ ಆಶೀರ್ವಾದ ಮಾಡಿದ್ದಾರೆ. ಈಗ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.