Monday, December 4, 2023
spot_img
- Advertisement -spot_img

ರಾಜ್ಯದಲ್ಲಿ ಇಂದು ‘ಟಿಇಟಿ’ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಇಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ. ವಿಶ್ವವಿದ್ಯಾಲಯ ಧನಸಹಾಯ ಆಯೋಗ ನಡೆಸುವ ನೆಟ್ (NET) ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ಸೆಟ್ (K-SET) ಮಾದರಿಯಲ್ಲಿಯೇ ಟಿಇಟಿ ಕೂಡ ನಡೆಯುತ್ತಿದೆ.

ಪತ್ರಿಕೆ 1 ಪರೀಕ್ಷೆಗೆ (1 ರಿಂದ 5ನೇ ತರಗತಿವರೆಗೆ ಬೋಧಿಸುವ ಶಿಕ್ಷಕರಿಗಾಗಿ) 1,43,705 ಮಂದಿ ಅರ್ಜಿ ಸಲ್ಲಿಸಿದ್ದು, 544 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ 2 ಪರೀಕ್ಷೆಗೆ (6 ರಿಂದ 8ನೇ ತರಗತಿಗೆ ಬೋಧಿಸುವ ಶಿಕ್ಷಕರಿಗಾಗಿ) 1, 89, 994 ಮಂದಿ ಅರ್ಜಿ ಹಾಕಿದ್ದು, 711 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪತ್ರಿಕೆ 1ರ ಪರೀಕ್ಷೆ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಪತ್ರಿಕೆ 2ರ ಪರೀಕ್ಷೆ ಅಪರಾಹ್ನ 2ಗಂಟೆಯಿಂದ ಸಂಜೆ 4:30ರವೆಗೆ ನಡೆಯಲಿದೆ. ರಾಜ್ಯ ಸರ್ಕಾರ ನಡೆಸುವ ಶಿಕ್ಷಕರ ನೇಮಕಾತಿಯಲ್ಲಿ ಭಾಗವಹಿಸಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಪರೀಕ್ಷೆಯ ಅಂಕಗಳನ್ನು ಶಿಕ್ಷಕರ ನೇಮಕಾತಿಗೆ ಮಾನದಂಡವನ್ನಾಗಿ ಪರಿಗಣಿಸಲಾಗುತ್ತದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles