ತಿಕೋಟಾ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಅಭಿವೃದ್ಧಿಯ ಸುವರ್ಣಯುಗ ಪುನಾರಂಭ ಆಗಲಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಯ ಡಂಬಲ್ ಎಂಜಿನ್ ಸರ್ಕಾರದ ಈ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ ನಂತರ ಮಲ್ಲಿಕಾರ್ಜುನ ಖರ್ಗೆಯವರು ಸಮಾಜದಲ್ಲಿ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ, ಜಿಲ್ಲೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸಿ, ಅಧಿಕಾರಕ್ಕೆ ತಂದರೆ ಖರ್ಗೆಯವರ ಕೈಬಲ ಪಡಿಸಿದಂತಾಗುತ್ತದೆ ಎಂದರು.
ಈ ಸಲ ಪ್ರತಿ ಪಕ್ಷದಲ್ಲಿದ್ದರೂ ಶಕ್ತಿಮೀರಿ ಕೆಲಸ ಮಾಡಿದ ಸಂತೃಪ್ತಿ ಇದೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಜಿಲ್ಲೆಯಲ್ಲಿ ಒಂದು ಸಾವಿರ ಕಿಮೀ ಮುಖ್ಯ ಕಾಲುವೆ ನಿರ್ಮಿಸಿದ್ದೇನೆ. ಈಗಿನ ಸರ್ಕಾರದಲ್ಲಿ ಒಂದು ಕಿಮೀ ಕಾಲುವೆ ಆಗಿಲ್ಲ. ಹೊನವಾಡ ಈಗ ಅಭಿವೃದ್ಧಿಯಿಂದಾಗಿ ಹೊನ್ನವಾಡ ಆಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.