ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಜನರು ಬದಲಾವಣೆ ಬಯಸಿ ಕಾಂಗ್ರೆಸನ್ನ ಬೆಂಬಲಿಸಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ವಿಶ್ವಾಸ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿ, ಗ್ಯಾರಂಟಿ ಕಾರ್ಡ್ ಕಾಂಗ್ರೆಸ್ ಗೆಲುವಿಗೆ ಮಹತ್ತರ ಪಾತ್ರ ವಹಿಸಿದ್ದು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ. ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು. ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದು ಅಭಿಪ್ರಾಯಪಟ್ಟರು.
ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದ್ದು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದರಲ್ಲಿ ಏನೂ ವಿಶೇಷತೆ ಇಲ್ಲ. ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗಲ್ಲ ಎಂದು ಹೇಳಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂ., 10 ಕೆ.ಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರ ಅಂಶಗಳಿಗೆ ಮನಸೋತು ರಾಜ್ಯದ ಜನತೆ ಕಾಂಗ್ರೆಸ್ಗೆ ಮತ ನೀಡಿದ್ದಾರೆ ಎಂದರು.