ಮಂಡ್ಯ : ತಮಿಳುನಾಡಿಗೆ ಮತ್ತೆ ನೀರು ಬಿಡಲು ಕಾವೇರಿ ನಿಯಂತ್ರಣ ಸಮಿತಿ ಸೂಚನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಕಾವೇರಿ ಹೋರಾಟ ಭುಗಿಲೆದ್ದಿದೆ. ಈ ನಿಟ್ಟಿನಲ್ಲಿ ನಗರದ ರೈತ ಹಿತರಕ್ಷಣಾ ಸಮಿತಿಯಿಂದ ಹಳೆಯ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿದೆ.
ಇದನ್ನೂ ಓದಿ : ‘ಮೊದಲೇ ಹೋಗಬೇಕಿತ್ತು, ಈಗ ಯಾಕೆ ಹೋಗ್ತಿದ್ದಾರೆ..?’ ಬಿಜೆಪಿ ನಾಯಕರ ಮೇಲೆ ಪರಂ ಕಿಡಿ!
ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ಬೆಂಗಳೂರು-ಮೈಸೂರ್ ಹೆದ್ದಾರಿ ತಡೆಯುವ ಮೂಲಕ ದಿಕ್ಕಾರ ಕೂಗಿದ ಅವರು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸ್ಪಷ್ಟವಾಗಿ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಹೇಳಿಲ್ಲ, ಈ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡ್ತೀವಿ ಎಂದಿದ್ದಾರೆ. ಆದರೆ ಇದು ತಡವಾದರೆ ಸುಪ್ರೀಂ ಕೋರ್ಟ್ ಮತ್ತೆ ನೀರು ಬಿಡಬೇಕೆಂದು ಆದೇಶ ಕೊಡಬಹುದು, ಆಗ ನಮಗೆ ಕುಡಿಯಲು ನೀರು ಸಿಗಲ್ಲ. ಆದ್ದರಿಂದ ನಮಗೆ ಆತಂಕವಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.


ಇದನ್ನೂ ಓದಿ : ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ
ಕಾವೇರಿ ನಿರ್ವಹಣಾ ಸಮಿತಿ, ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ ನೀಡಿದೆ. ಇದರಿಂದ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಮಂಡ್ಯ ರೈತ ಹಿತರಕ್ಷಣಾ ಸಮಿತಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಜಿಲ್ಲೆಯ ಶಾಸಕರು ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.