ಕಲಬುರಗಿ: ರಾಜ್ಯದಲ್ಲಿ ಈ ಹಿಂದೆ ನಡೆದ ಪಿಎಸ್ ಐ ಪರೀಕ್ಷೆ ಸೇರಿದಂತೆ, ಅ.28 ರಂದು ವಿವಿಧ ಇಲಾಖೆಗೆ ಸಂಬಂಧಿಸಿದಂತೆ ನಡೆದ ಎಸ್ ಡಿ ಎ ಹಾಗೂ ಎಫ್ ಡಿ ಎ ಪರೀಕ್ಷೆಗಳಲ್ಲಿ ಬ್ಲೂಟೂಥ್ ಬಳಸಿ ಅಕ್ರಮ ಎಸಗಲಾಗಿತ್ತು. ಈ ಪ್ರಕರಣದ ಬಂಧಿತ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್’ನನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸೆರೆಹಿಡಿದ ಪೊಲೀಸರು ನ್ಯಾಯಾಂಗ ಬಂಧನದಲ್ಲಿ ಇರಿಸಿ, ಬುಧವಾರ ಮಧ್ಯಾಹ್ನ ಕಲಬುರಗಿಯ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಮಟ್ಟಿಗೆ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಧಿಕಾರಿಗಳ ಮನವಿಯನ್ನು ಅಸ್ತು ಎಂದಿರುವ ನ್ಯಾಯಾಲಯ, ಆರೋಪಿಯನ್ನು 9 ದಿನಗಳ ಮಟ್ಟಿಗೆ ಸಿಐಡಿ ವಶಕ್ಕೆ ನೀಡಿದೆ.
ಇದನ್ನೂ ಓದಿ: ‘ಎಲ್ಲರೂ ಟ್ರೋಲ್ ಮಾಡಿದಾಗ ರಾಹುಲ್ ಗಾಂಧಿ ಮಾತ್ರ ಶಮಿ ಜೊತೆ ನಿಂತಿದ್ದರು’
ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಸಿಐಡಿ ಪೊಲೀಸರು, ಕಲಬುರಗಿಯ ಐವಾನ್-ಇ ಶಾಹಿ ಪ್ರದೇಶದ ಗೆಸ್ಟ್ ಹೌಸಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆಯು ಕೂಡ ಪಿಎಸ್ಐ ಅಕ್ರಮ ಸಂಬಂಧಿಸಿದಂತೆ ಇದೇ ಗೆಸ್ಟ್ ಹೌಸ್‌ನಲ್ಲಿ ಆತನ ವಿಚಾರಣೆ ನಡೆಸಿದ್ದರು.
ಪ್ರಕರಣ ಸಂಬಂಧ ದಾಖಲಾದ ಸಂದರ್ಭದಲ್ಲಿ ಆರ್.ಡಿ ಪಾಟೀಲ್ ದೂರುಗಳನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ನ ಕಲಬುರಗಿ ಪೀಠಕ್ಕೆ ಪಾಟೀಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನೂ ವಿಚಾರಣೆ ನಡೆಸಿದ ನ್ಯಾಯಾಲಯ, ದೂರುಗಳ ರದ್ದತಿಗೆ ಅಷ್ಟೊಂದು ಆತುರ ಏನಿದೆ? ಎಂದು ಪ್ರಶ್ನಿಸಿ, ಅರ್ಜಿಯ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಸ್ಮಾರಕಗಳ ದತ್ತು ಪಡೆದವರಿಗೆ ಬಹುಮಾನ: ಹೆಚ್.ಕೆ.ಪಾಟೀಲ್
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.