ಹೈದರಾಬಾದ್: ಅಹಮದಾಬಾದ್‌ನಲ್ಲಿ ಭಾನುವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ಸ್ಥಗಿತಗೊಳಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾನೆ.
ವಿಡಿಯೋದಲ್ಲಿ ನಿಷೇಧಿತ ಖಾಲಿಸ್ತಾನಿ ಸಂಘಟನೆಯ ಸಂಸ್ಥಾಪಕ ‘ಸಿಖ್ಸ್ ಫಾರ್ ಜಸ್ಟೀಸ್’ 1984ರ ಸಿಖ್ ವಿರೋಧಿ ದಂಗೆಗಳು ಮತ್ತು 2002ರ ಗುಜರಾತ್ ಗಲಭೆಗಳ ಬಗ್ಗೆ ಮಾತನಾಡುವುದನ್ನು ಕಾಣಬಹುದು, ಹೀಗಾಗಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳನ್ನು ಪ್ರಚೋದಿಸುವ ಪ್ರಯತ್ನವನ್ನು ಮಾಡಲಾಗಿದೆ ಎನ್ನಲಾಗ್ತಿದೆ.
ಇದನ್ನೂ ಓದಿ: ಆದಿತ್ಯ ಠಾಕ್ರೆ ಸೇರಿ ಇಬ್ಬರ ವಿರುದ್ಧ ದಾಖಲಾಯ್ತು ಎಫ್ಐಆರ್!
ಭಾನು ವಾರ ನಡೆಯಲಿರುವ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ರದ್ದು ಮಾಡಬೇಕು. ಇಲ್ಲದಿದ್ದರೆ ನಾವೇ ಸ್ಥಗಿತಗೊಳಿಸುವುದಾಗಿ ಆತ ವಿಡಿಯೋದಲ್ಲಿ ಬೆದರಿಕೆ ಹಾಕಿದ್ದಾನೆ.
ಇದನ್ನೂ ಓದಿ: ಅಝರುದ್ಧೀನ್ ಜೊತೆ ಕ್ರಿಕೆಟ್ ಆಡಿ, ವೋಟ್ ಹಾಕ್ಬೇಡಿ: ಕೆಟಿಆರ್
ಇದಕ್ಕೂ ಮೊದಲು ಅಕ್ಟೋಬರ್‌ನಲ್ಲಿ, ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಿಂದ ಕಲಿಯುವಂತೆ ಬೆದರಿಕೆ ಹಾಕಿದ್ದ, ಭಾರತದಲ್ಲಿಯೂ ಇದೇ ರೀತಿಯ ಸ್ಥಿತಿ ನೋಡಬೇಕಾಗುತ್ತದೆ ಎಂದಿದ್ದ. ಇದಲ್ಲದೆ ಇಂದಿರಾ ಗಾಂಧಿ ಹುಟ್ಟುಹಬ್ಬದಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಹಾಕಿದ್ದಾನೆ, ಜೊತೆಗೆ ಆ ದಿನ ಏರ್ ಇಂಡಿಯಾ ವಿಮಾನ ಹಾರಾಟ ಮಾಡದಂತೆ ಸರ್ಕಾರಕ್ಕೆ ಬೆದರಿಕೆ ಒಡ್ಡಿದ್ದಾನೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.