ಹೈದ್ರಾಬಾದ್: ಹಿರಿಯ ಬಹುಭಾಷಾ ನಟಿ , ರಾಜಕಾರಣಿ ಖುಷ್ಬೂ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಟ್ವಟರ್‌ನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
“ಜ್ವರ, ಗಂಟಲು ನೋವು ಮತ್ತು ಆಲಸ್ಯ ನನ್ನನ್ನು ಬಹುವಾಗಿ ಕಾಡುತ್ತಿದೆ. ಅದೃಷ್ಟವಶಾತ್ ನಾನು ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇದಕ್ಕೆ ನಾನು ಬೇಗನೆ ಚಿಕಿತ್ಸೆ ಪಡೆಯದೇ ಹೋದಲ್ಲಿ ಗುಣಮುಖವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.
ಖುಷ್ಬೂ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. 2010 ರಲ್ಲಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ನಾಲ್ಕು ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಸೇರಿದ್ದರು. ಅದಾಗಿ 2020 ರಲ್ಲಿ ಬಿಜೆಪಿ ಕಡೆಗೆ ಮುಖ ಮಾಡಿದರು.