ಬೆಂಗಳೂರು: ನಾನು ಸಿಎಂ ಆಯೋಜಿಸಿರುವ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗ್ತಿರೋದು ನಿಜ, ಆದರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ‘ಯಾರ ಪರ ಕೂಡ ನಾನು ಟಿಕೆಟ್ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಕೊಡಿಸುವಷ್ಟು ನಾನು ದೊಡ್ಡವನಲ್ಲ. ನಮ್ಮವರಿಗೋಸ್ಕರ ಕೆಲವು ನಿಲುವು ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಜಾಕ್ ಮಂಜು ಪರವಾಗಿ ಟಿಕೆಟ್ ಕೇಳಿದ್ದೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದರು.
ಕಿಚ್ಚ ಸುದೀಪ್ ಅವರು ರಾಜಕೀಯ ಸೇರುತ್ತಾರೆ, ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಕೇಳಿಬಂದಿತ್ತು, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಕಿಚ್ಚ ಸುದೀಪ್ ರವರೇ ಉತ್ತರ ಕೊಡಬೇಕಿದೆ.
ಕಿಚ್ಚ ಸುದೀಪ್ ಗೆ ರಾಜಕೀಯದಲ್ಲಿ ಹಲವಾರು ಗೆಳೆಯರಿದ್ದು, ಈ ಮೊದಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಅವರಿಗೆ ಆಹ್ವಾನ ನೀಡಲಾಗಿತ್ತು.
ಇನ್ನೂ ಬೆದರಿಕೆ ಪತ್ರದ ವಿಚಾರವಾಗಿ ಪ್ರತಿಕ್ರಿಯಿಸಿ, ಈಗ ನಾನು ಮಾತಾಡಲ್ಲ , ಲೆಟರ್ ಬರೆದವರಿಗೆ ಯಾವ ರೀತಿ ಉತ್ತರ ಕೊಡಬೇಕು ಗೊತ್ತಿದೆ ಎಂದು ಹೇಳಿದರು.