ಬೆಂಗಳೂರು: ನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗ ಬೃಹತ್ ರಾಲಿಯಲ್ಲಿ ಭಾಗವಹಿಸಿದ್ದಾರೆ.
ಇಂದು ಶಿಗ್ಗಾಂವಿಯಿಂದ ಬಿಜೆಪಿ ಪ್ರಚಾರ ಪ್ರಾರಂಭ ಮಾಡಿರುವ ನಟ ಸುದೀಪ್ ಪ್ರಚಾರ ಪ್ರಾರಂಭ ಮಾಡಿರುವ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ”ನಮಸ್ಕಾರ, ಶ್ರೀ ಕನಕದಾಸರು ಮತ್ತು ಶ್ರೀ ಸಂತ ಶಿಶುನಾಳರು ಹುಟ್ಟಿದ ಶಿಗ್ಗಾವಿ ತಾಲೂಕಿನಿಂದಲೇ ಪ್ರಚಾರ ಶುರು ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ ಮತ್ತು ಸಂತೋಷದ ಸಂಗತಿ. ಎಲ್ಲರಿಗೂ ಶುಭವಾಗಲಿ” ಎಂದು ಟ್ವೀಟ್ ಮಾಡಿರುವ ಸುದೀಪ್ ಟ್ವೀಟ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗಿನ ಸೆಲ್ಫಿ ಹಂಚಿಕೊಂಡಿದ್ದಾರೆ.
ಶಿಗ್ಗಾಂವಿಯಲ್ಲಿ ಪ್ರಚಾರ ಆರಂಭಿಸಿದ್ದಕ್ಕೆ ಬಹಳ ಖುಷಿಯಾಗಿದೆ. ಬೊಮ್ಮಾಯಿ ಮಾಮ ಪರವಾಗಿ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸಿಎಂ ಬೊಮ್ಮಾಯಿಯವರು ಕಡಿಮೆ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನನ್ನನ್ನು ಆಹ್ವಾನಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ನಾನೂ ಸಹ ಸುಮ್ಮ-ಸುಮ್ಮನೆ ಪ್ರಚಾರಕ್ಕೆ ಬರುವವನಲ್ಲ. ಕೆಲಸಗಳಾಗುತ್ತವೆ ಎಂಬ ನಂಬಿಕೆ ಇದ್ದರೆ ಮಾತ್ರ ಬರ್ತೇನೆ” ಎಂದು ಕಿಚ್ಚ ಸುದೀಪ್ ಹೇಳಿದ್ದರು.