ಬೆಂಗಳೂರು: ನಟ ಸುದೀಪ್ ಬೆದರಿಕೆ ಪತ್ರ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸುದೀಪ್‌ಗೆ ಬಂದಿದ್ದ ಬೆದರಿಕೆ ಪತ್ರ ಜಾಕ್ ಮಂಜುಗೆ ಈ ಪತ್ರ ಸಿಕ್ಕಿದೆ. ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಲಾಗಿದೆ.
‘ನಟನ ಘನತೆಗೆ ಧಕ್ಕೆ ತರಲು ಮಾಡಿರೋ ಸಂಚು’ ಎಂದು ದೂರಿದ್ದಾರೆ. ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣ ಈಗ ಸಿಸಿಬಿಗೆ ವರ್ಗಾವಣೆ ಆಗಿದೆ.
ಬೆದರಿಕೆ ಪತ್ರ ವಿಚಾರವಾಗಿ ಸಚಿವ ಡಾ. ಸುಧಾಕರ್ ಪ್ರತಿಕ್ರಿಯಿಸಿದ್ದು, ಸುದೀಪ್ ಸುಪ್ರಸಿದ್ಧ ನಟರಾಗಿದ್ದು, ಯಾರೋ ಕಿಡಿಗೇಡಿಗಳು ಬೆದರಿಕೆ ಹಾಕಿದ್ರೆ ಸರ್ಕಾರ ಸುಮ್ಮನೆ ಕುಳಿತುಕೊಳ್ಳಲ್ಲ ಕ್ರಮ ಖಚಿತ ಎಂದಿದ್ದಾರೆ.