ಕೋಲಾರ: ಕಾಂಗ್ರೆಸ್ ಪರ ಪ್ರಚಾರಕ್ಕೆ ಬನ್ನಿ ಅಂತಾ ನಟ ಸುದೀಪ್ಗೆ ಕರೆದಿಲ್ಲ. ಅವರಿಗೆ ರಾಜಕೀಯಕ್ಕೆ ಬರುವಂತೆ ನಾನು ಆಹ್ವಾನ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪರ ಪ್ರಚಾರಕ್ಕೆ ಬನ್ನಿ ಅಂತಾ ನಟ ಸುದೀಪ್ಗೆ ಕರೆದಿಲ್ಲ. ಅವರಿಗೆ ರಾಜಕೀಯಕ್ಕೆ ಬರುವಂತೆ ನಾನು ಆಹ್ವಾನ ನೀಡಿಲ್ಲ. ಅನೇಕ ವಿಚಾರವಾಗಿ ಸಲಹೆ ಪಡೆಯಲು ಸುದೀಪ್ ಭೇಟಿಯಾಗಿದ್ದೇನೆ. ಮೊದಲಿನಿಂದಲೂ ನಟ ಸುದೀಪ್ ನನಗೆ ಒಳ್ಳೆಯ ಸ್ನೇಹಿತ ಎಂದು ತಿಳಿಸಿದರು.
ಕಿಚ್ಚ ಸುದೀಪ್ ಹಲವು ಬಾರಿ ನನಗೆ ರಾಜಕೀಯಕ್ಕೆ ಬರಲು ಆಸಕ್ತಿ ಇಲ್ಲ ಎಂದು ಹೇಳಿದ್ದರು, ಜೊತೆಗೆ ಯಾರ ಪರವಾಗಿಯೂ ಪ್ರಚಾರ ಮಾಡಲ್ಲ ಎಂದಿದ್ದರು.
ಕಿಚ್ಚ ಸುದೀಪ್ ರಾಜಕೀಯಕ್ಕೆ ಬರುತ್ತಾರೆ, ಅದರಲ್ಲೂ ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎನ್ನುವ ಮಾತುಗಳು ಸಹ ಕೇಳಿಬಂದಿದ್ದವು. ಅದಕ್ಕೆ ಪುಷ್ಟಿ ನೀಡುವಂತೆ ಕಿಚ್ಚ ಸುದೀಪ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರೋ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು .