ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ದಂಡು ಸೂರತ್ ಗೆ ತೆರಳುತ್ತಿದ್ದು, ಫ್ಲೈಟ್ ನಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಅಭಿಪ್ರಾಯವು ತುಂಬಾ ಸರಳವಾಗಿದೆ. ಕಾಂಗ್ರೆಸ್ ಏಕೆ ನ್ಯಾಯಾಂಗದ ಮೇಲೆ ಈ ರೀತಿಯ ಅನಗತ್ಯ ಒತ್ತಡ ಹಾಕಲು ಪ್ರಯತ್ನಿಸುತ್ತಿದೆ. ನ್ಯಾಯಾಂಗದ ವಿಷಯಗಳನ್ನು ಎದುರಿಸಲು ಅನೇಕ ವಿಧಾನ ಮತ್ತು ಮಾರ್ಗಗಳಿವೆ. ಆದರೆ ಇದು ಮಾರ್ಗವೇ? ಎಂದು ವ್ಯಂಗ್ಯವಾಡಿದರು.
ಮಾನನಷ್ಟ ಮೊಕದ್ದಮೆಯಲ್ಲಿ ಮಾರ್ಚ್ 23 ರಂದು ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ನ್ಯಾಯಾಲಯ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕ ರಾಹುಲ್ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು.