Thursday, September 28, 2023
spot_img
- Advertisement -spot_img

ರಾಜ್ಯ ರಾಜಕೀಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ!

ಹುಬ್ಬಳ್ಳಿ: ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜಕೀಯದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದ್ದು, ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ ಎಂದು ಹೇಳಿದರು.

ಯುಗಾದಿವರೆಗೂ ಸಮಯ ಇದೆ. ಎಲ್ಲವೂ ಕಾದು ನೋಡಬೇಕಾಗಿದೆ ಎಂದು ಕೋಡಿಶ್ರೀ ಹೇಳಿದ್ದಾರೆ. ಮುಂದಿನ ವರ್ಷದ ಯುಗಾದಿ ಹಬ್ಬದ ಆಸುಪಾಸಿನಲ್ಲೇ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ವೇಳೆ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ಕೋಡಿಶ್ರೀ ಪರೋಕ್ಷವಾಗಿ ಸುಳಿವು ನೀಡಿದರು.

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರವರ ವಿಚಾರ. ಅದರ ಬಗ್ಗೆ ಹೇಳಲು ಆಗುವುದಿಲ್ಲ ಎಂದು ಕೋಡಿಶ್ರೀ ಹೇಳಿದರು.

ಮನುಷ್ಯ ಮಾಡಿದ ತಪ್ಪುಗಳಿಗೆ ದೇವರು ಕ್ಷಮಿಸುತ್ತಾನೆ. ಆದ್ರೆ ಮನುಷ್ಯ ಮಾಡಿದ ಪಾಪ‌ ಕರ್ಮಗಳು ಮನುಷ್ಯನನ್ನೇ ಕ್ಷಮಿಸುವುದಿಲ್ಲ. ಮನುಷ್ಯನ‌ ಪಾಪ ಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನ‌ ಕರ್ಮ ಹೆಚ್ಚಾದಾಗ ಇಂತಹ ಪರಿಸ್ಥಿತಿ ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ ಎಂದರು.

ಉದಯನಿಧಿ ನೋವನ್ನು ಹೊರಹಾಕಿದ್ದಾರೆ: ಸನಾತನ ಧರ್ಮದ ವಿಚಾರ ಬಗ್ಗೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರ ಕುರಿತು ಮಾತನಾಡಿದ ಅವರು, ಇದು ಅವರವರ ಧರ್ಮದವರ ಹೇಳಿಕೆ, ಅದು ಅವರ‌ ನೋವಿನ ಸಂಗತಿ. ಎಲ್ಲ ಜನಾಂಗದಲ್ಲಿಯೂ ಅವರವರ ನೋವು ಇರುತ್ತೆ. ಅದನ್ನು ಈ ರೀತಿ ನೋವಿನ‌ ಮೂಲಕ ಹೊರ ಹಾಕುತ್ತಾರೆ. ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ. ಉದಯನಿಧಿ ಸ್ಟಾಲಿನ್ ಅವರು ಯಾವ ನೋವಿನಿಂದ ಹೇಳಿದ್ದಾರೋ ಗೊತ್ತಿಲ್ಲ. ಆಯಾ ಧರ್ಮದಲ್ಲಿರೋರು ತಮಗಾಗಿರೋ‌ ನೋವಿನಿಂದಾಗಿ ಈ ರೀತಿ‌ ಹೇಳಿಕೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ರಾಜ್ಯಕ್ಕೆ ʼಮಹಿಳಾ ಸಿಎಂʼ ಯೋಗ: ಕೋಡಿಶ್ರೀ ಸ್ಫೋಟಕ ಭವಿಷ್ಯ!

ಜನರಲ್ಲಿ ಪೂರ್ಣವಾದ ಜ್ಞಾನದ‌ ಕೊರತೆ ಇದೆ. ಹಾಗಾಗಿ ಈ ರೀತಿ ಧರ್ಮ, ರಾಜಕೀಯ ವಿಚಾರವನ್ನು ಮುನ್ನೆಲೆಗೆ ತರುತ್ತಾರೆ. ಧರ್ಮ‌ ಎಂದರೆ ನೆಮ್ಮದಿ,‌ ಶಾಂತಿ ನಿಜವಾದ ಜ್ಞಾನ ಮೂಡಿಸುತ್ತೆ. ಆದ್ರೆ ಅದರಲ್ಲಿ ನೆಮ್ಮದಿ, ಶಾಂತಿ ಕಂಡುಕೊಳ್ಳದವರಿಂದ‌ ಈ ರೀತಿ ಅಸಮಾಧಾನ‌ ಮೂಡುತ್ತೆ. ಧರ್ಮದ ವಿಚಾರವಾಗಿ ಹೇಳಿಕೆ ನೀಡುವವರು ಯಾಕೆ‌ ನೊಂದಿದ್ದಾರೆ ಎಂದು ಅವರೇ ಹೇಳಬೇಕು ಎಂದರು.

ಸರ್ಕಾರಗಳು ಆರ್ಥಿಕ ದಿವಾಳಿ ಆಗಲ್ಲ: ಉಚಿತ ಭಾಗ್ಯಗಳಿಂದ ರಾಜ್ಯ ಆರ್ಥಿಕ ದಿವಾಳಿತನಕ್ಕೆ ಹೋಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರದ ಉಚಿತ ಭಾಗ್ಯಗಳು ಒಳ್ಳೆಯದೇ, ಆ ರೀತಿ ಏನೂ ಆಗಲ್ಲ. ರಾಜ್ಯ ಸಂಪಬ್ಧರಿತವಾಗಿರುತ್ತದೆ. ಉಚಿತ ಭಾಗ್ಯಗಳಿಂದ ಜನಸಾಮಾನ್ಯರಿಗೆ ಸಾಕಷ್ಟು ಅನುಕೂಲಗಳಾಗಿವೆ. ಕೇಂದ್ರ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ. ರಾಜ್ಯ ಮತ್ತು ಕೇಂದ್ರ ಆರ್ಥಿಕ ದಿವಾಳಿಯಾಗೋ ಪ್ರಶ್ನೆ ಬರುವುದೇ ಇಲ್ಲ ಎಂದು ಕೋಡಿಶ್ರೀ ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles