ಬೆಂಗಳೂರು : ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ(ಸೆ.7) ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಮಂಗಳವಾರ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಾದಯಾತ್ರೆಯ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಇದನ್ನೂ ಓದಿ : ಕಾವೇರಿ ಜಲ ವಿವಾದ : ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ಅರ್ಜಿ ವಿಚಾರಣೆ
ಅದರ ಭಾಗವಾಗಿ ರಾಮನಗರದಲ್ಲಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು ಆದರೆ ಸಂಚಾರಕ್ಕೆ ತೊಂದರೆಯಾಗುವುದರಿಂದ ಸ್ಥಳ ಬದಲಾಯಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರೊಂದಿಗೆ ರಾಮನಗರದಲ್ಲಿ ಒಂದು ಗಂಟೆ ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಗುರುವಾರ ಸಂಪುಟ ಸಭೆ ನಡೆಯಲಿರುವ ಕಾರಣ ಶುಕ್ರವಾರ ಕಾರ್ಯಕ್ರಮ ನಡೆಸಲು ಸಚಿವರಿಗೆ ಮನವಿ ಮಾಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಾದಯಾತ್ರೆಯನ್ನು ಆಯೋಜಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಬಂದ್ ಕರೆ ಕೊಟ್ಟ ಖಾಸಗಿ ಸಾರಿಗೆ ಒಕ್ಕೂಟ : ಸುದ್ದಿಗೋಷ್ಠಿ ಕರೆದ ಸಾರಿಗೆ ಸಚಿವರು
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.