ಬೆಂಗಳೂರು: ಹೃದಯಾಘಾತದಿಂದ ಸಾವಿಗೀಡಾಗಿದ್ದ ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅಂತ್ಯಕ್ರಿಯೆ ಇಂದು ನಡೆಯಲಿದೆ.
ಚಾಮರಾಜನಗರ ತಾಲೂಕು ಹೆಗ್ಗವಾಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಹೆಗ್ಗವಾಡಿಯ ತೋಟದಲ್ಲಿ ಮಧ್ಯಾಹ್ನ 3ಕ್ಕೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಧ್ರುವನಾರಾಯಣ್ ಅಂತ್ಯಕ್ರಿಯೆ ನೆರವೇರಲಿದ್ದು ಸಂಬಂಧಿಕರು, ರಾಜಕೀಯ ನಾಯಕರು, ಸ್ನೇಹಿತರು ಭಾಗಿಯಾಗಲಿದ್ದಾರೆ. ಹುಲ್ಲಹಳ್ಳಿ ರಸ್ತೆಯಿಂದ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದ್ದು ಇದಾದ ಬಳಿಕ ಹುಟ್ಟೂರು ಹೆಗ್ಗವಾಡಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ಆರ್ ಧ್ರುವನಾರಾಯಣ ಅವರೊಂದಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು ಎಂದು ಭಾವುಕರಾಗಿದ್ದರು.