ದೊಡ್ಡಬಳ್ಳಾಪುರ: ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಹಾಗೂ ಉದ್ಯೋಗ ಸೃಷ್ಟಿಸಿ ದೇಶ ಕಟ್ಟುವ ಉದ್ದೇಶದಿಂದ ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರಜಾ ಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಂದ 50 ಕ್ವಿಂಟಾಲ್ ರಾಗಿ ಖರೀದಿ ಮಾಡುತ್ತೇವೆ. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ ,ರಾಜಕೀಯದಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ, ಕಾಂಗ್ರೆಸ್ ಪಕ್ಷ ಒಂದು ಸಿದ್ಧಾಂತದ ಮೇಲೆ ನಿಂತಿದೆ ಎಂದು ಹೇಳಿದರು.
ರಾಜ್ಯದಲ್ಲಿ 40% ಕಮಿಷನ್ ಸರ್ಕಾರ ನಡೆಯುತ್ತಿದೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯ ಕರ್ಮಕಾಂಡ ಪ್ರಜೆಗಳು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ. ನಾವು ಅಧಿಕಾರಕ್ಕಾಗಿ ಆಸೆ ಪಡಲಿಲ್ಲ. ಪಾಪ ಕುಮಾರಸ್ವಾಮಿ ಕೈಯ್ಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದರು.ಮಾಜಿ ಸಚಿವ ಈಶ್ವರಪ್ಪ ಮಾಡಿದ ಭ್ರಷ್ಟಾಚಾರಕ್ಕೆ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.