ಚಾಮರಾಜನಗರ: ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪರ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಆಕಾಂಕ್ಷಿ ಪುಷ್ಪಾ ಅಮರನಾಥ್ ಬ್ಯಾಟ್ ಬೀಸಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಪರ ಪೋಸ್ಟ್ ಹಂಚಿಕೊಂಡಿರುವ ಅವರು, ಯತೀಂದ್ರರವರ ಮೇಲಿನ ಹೆಚ್.ಡಿ. ಕುಮಾರಸ್ವಾಮಿ ಆರೋಪಗಳಿಗೆ ಪುಷ್ಪಾ ಅಮರನಾಥ್ ಟಾಂಗ್ ಕೊಟ್ಟಿದ್ದಾರೆ. ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ, ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ವರುಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ.
ಇದನ್ನೂ ಓದಿ; ಮಧ್ಯಾಹ್ನ ಬಿಸಿಯೂಟದಲ್ಲಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್: ಸಚಿವ ಮಧು ಬಂಗಾರಪ್ಪ
ಡಾ.ಯತೀಂದ್ರರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿ ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ ಎಂದು ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಬರೆದುಕೊಂಡಿದ್ದಾರೆ.
ಹತಾಶೆ ಎಂಬುದು ಕುಮಾರಸ್ವಾಮಿಯವರನ್ನು ಕಿತ್ತು ತಿನ್ನುತ್ತಿದೆ, ಹೀನಾಯ ಸೋಲಿನ ಹತಾಶೆ, ಅಧಿಕಾರ ಸಿಗದಿರುವ ಹತಾಶೆ,ಪಕ್ಷ ಖಾಲಿಯಾಗುತ್ತಿರುವ ಹತಾಶೆ, ಕಾರ್ಯಕರ್ತರ ಅಸಹಕಾರದ ಹತಾಶೆ, ಈ ಎಲ್ಲಾ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ. ವಿದ್ಯು ತ್ತನ್ನೂ ಬಿಡದೆ ಕಳ್ಳತನ ಮಾಡಿದವರೊಬ್ಬರು ಸಮಾಜಕ್ಕೆ ಬುದ್ದಿ ಹೇಳುತ್ತೇನೆ ಎಂದು ಹೊರಡುವುದು ಪರಮಹಾಸ್ಯ ಎಂದು ಬರೆದಿದ್ದಾರೆ.


ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿರೋ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ವರುಣ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.ಈ ವೇಳೆ ತಂದೆಗೆ ಫೋನ್ ಮಾಡಿದ್ದಾರೆ. ನಾನು ಹೇಳಿದ್ದನ್ನು ಮಾಡಿ ಎಂದು ಹೇಳಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.