ಬೆಂಗಳೂರು: ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತಾಡಿಲ್ಲ ವಿಕಿಪಿಡಿಯಾದಲ್ಲಿ ಇರುವುದನ್ನು ಹೇಳಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು.
ಮಾಧ್ಯಮದವರೊಂದಿಗೆ ಮಾತನಾಡಿ, ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮ ಪಾಲಿಸುತ್ತಿದ್ದಾರೆ. ಬಿಜೆಪಿಯವರು ಚುನಾವಣೆಗೆ ಹಿಂದೂ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ನಮಗೆ ಹಿಂದೂ ಧರ್ಮದ ಬಗ್ಗೆ ಗೌರವವಿದೆ ಎಂದು ಹೇಳಿದ್ದಾರೆ. ನಾವು ಕಟ್ಟಿದಷ್ಟು ದೇವಸ್ಥಾನಗಳನ್ನು ಬಿಜೆಪಿಯವರು ಕಟ್ಟಿಲ್ಲ. ನಾವು ಅಧಿಕಾರದಲ್ಲಿದ್ದಾಗ ದೇವಸ್ಥಾನಗಳಿಗೆ ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ. ಬಿಜೆಪಿಯವರು ಏನೂ ಕೊಡದೆ ಪ್ರಚಾರ ಪಡೆಯುತ್ತಾರೆ. ಬಿಜೆಪಿಯವರು ತಮಗೆ ಬೇಕಾದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
4 ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ.ಚುನಾವಣೆ ಸಮೀಪಿಸುತ್ತಿದ್ದಂತೆ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ 5 ವರ್ಷಗಳಲ್ಲಿ ನೆರೆಯಿಂದಾಗಿ 2.62 ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ. ರಸ್ತೆಗಳು, 30 ಸಾವಿರ ಸೇತುವೆಗಳು ಹಾನಿಯಾಗಿವೆ, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದೆ ಎಂದರು.