ಮಂಗಳೂರು: ನಾನು ಎಲ್ಲಿ ಹೋದ್ರು ಇದೊಂದು ತಲೆನೋವು, ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಆಜಾನ್ ಕೇಳಿಸಿದ್ದು, ಈಶ್ವರಪ್ಪ ಗರಂ ಆಗಿದ್ದಾರೆ. ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಅಂದಿದ್ದಾರೆ. ಈ ವಿಚಾರ ಎಲ್ಲೆಡೆ ಚರ್ಚೇಗೆ ಗ್ರಾಸವಾಗಿದ್ದು ಕೆ ಎಸ್ ಈಶ್ವರಪ್ಪ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.
ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಆಜಾನ್‌ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಅನ್ನೋದಷ್ಟೇ ನನ್ನ ಮಾತಿನ ಅರ್ಥವಾಗಿತ್ತು ಎಂದಿದ್ದಾರೆ. ಇದು ಧಾರ್ಮಿಕ ನಿಂದನೆ ಮಾಡಿದಂತೆ ಆಗಿಲ್ಲ. ಅದನ್ನು ರಾಜ್ಯದ ಜನರು ತೀರ್ಮಾನ ಮಾಡ್ತಾರೆ. ನಾನು ಯಾವತ್ತೂ ಜಾತಿ ಮತ ನೋಡಿಲ್ಲ, ನನ್ನ ಮನೆಗೆ ಸಹಾಯ ಕೇಳಿಕೊಂಡು ಮುಸ್ಲಿಂರು ಬರ್ತಾರೆ ಎಂದು ತಿಳಿಸಿದರು.
ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ಆದೇಶವಿದ್ದು ಇಂದಲ್ಲ, ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದಿದ್ದಾರೆ.