ಬೆಂಗಳೂರು: ಗೌರಿ ವ್ರತ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ KSRTC 1,200 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.
ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳ ಮೂಲಕ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೂ ಸೆಪ್ಟೆಂಬರ್ 18ರಂದು ಹೆಚ್ಚುವರಿ ಬಸ್‌ಗಳ ಸೇವೆ ಕಲ್ಪಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಬಸ್ ಸೇವೆ ಎಲ್ಲಿಂದ..?
* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದರ್ಗಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್
* ಸ್ಯಾಟಲೈಟ್ ಬಸ್ ನಿಲ್ದಾಣದಿಂದ (ಮೈಸೂರು ರಸ್ತೆ) ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ
*ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಲಿವೆ.
ಇದನ್ನೂ ಓದಿ: ‘KSRTC ಸೇರಿ ಇತರೆ ನಿಗಮಗಳಿಗೆ 13,000 ಸಿಬ್ಬಂದಿ ನೇಮಕ, 4,000 ಬಸ್ ಖರೀದಿ’
ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲು https://ksrtc.karnataka.gov.in/ ವೆಬ್‌ಸೈಟ್ ಸಂಪರ್ಕಿಸುವಂತೆ ಕೆಎಸ್‌ಆರ್‌ಟಿಸಿ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.