ಬೆಂಗಳೂರು: ಬಿಜೆಪಿಯವರೇ ದಾಖಲೆಗಳಿಲ್ಲದೆ ಮಾತಾಡುವುದು ಕುಮಾರಸ್ವಾಮಿ ಅವರ ಜಾಯಮಾನವೇ ಅಲ್ಲ ಎಂದು ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸ್ಯಾಂಟ್ರೋ ರವಿ ಜತೆ ಬಿಜೆಪಿ ನಾಯಕರ ಸಂಪರ್ಕ ಆರೋಪ ವಿಚಾರವಾಗಿ ಮತ್ತೆ ಟ್ವೀಟ್ ವಾರ್ ಆರಂಭಿಸಿದ್ದಾರೆ. ಸ್ಯಾಂಟ್ರೋ ರವಿಯೊಂದಿಗೆ ನಿಮ್ಮ ಸಚಿವರಿಗಿರುವ ಸಂಬಂಧವೇನು? ಉನ್ನತ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡಿಸಿ, ವರ್ಗಾವಣೆ ಕೆಲಸ ಮಾಡಿಸುತ್ತೇನೆ ಎನ್ನುವ ಈ ಡೀಲ್ ಗಿರಾಕಿಯ ವ್ಯವಹಾರಕ್ಕೆ ಸಾಥ್ ನೀಡಿದವರು ಯಾರು? ಸ್ಯಾಂಟ್ರೊ ರವಿಯ ಆಡಿಯೊಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಚಯವೇ ಇಲ್ಲವೆಂದ ಮೇಲೆ ಆತನಿಗೆ ಇಡೀ ರಾಜ್ಯ ಸರ್ಕಾರ ತನ್ನ ಜೇಬಲ್ಲಿದೆ ಎಂದು ಮಾತನಾಡುವ ಅಧಿಕಾರ ಕೊಟ್ಟವರು ಯಾರು? ಕಮಿಷನ್ ದಂಧೆಗಾಗಿ ಇಂತಹ ಎಷ್ಟು ಅಯೋಗ್ಯರನ್ನು ಸಾಕ್ತಾ ಇದ್ದೀರಿ ಎಂದು ಪ್ರಶ್ನಿಸಿದರು.
ದಾಖಲೆಯಿಲ್ಲದೇ ಮಾತಾಡುವುದು ಹೆಚ್ಡಿಕೆ ಜಾಯಮಾನವೇ ಅಲ್ಲ. ಸಚಿವರನ್ನು ಸಮರ್ಥಿಸಲು ಈಗ ಕಾಗಕ್ಕ-ಗುಬ್ಬಕ್ಕನ ಕಥೆ ಹೇಳುತ್ತಿದ್ದೀರಿ. ಈ ಸ್ಯಾಂಟ್ರೋ ರವಿಗೆ ಕುಮಾರಕೃಪದಲ್ಲಿ ವ್ಯವಸ್ಥೆ ಕಲ್ಪಿಸಿದ್ದು ಯಾರು? ಸಿಎಂ ಬಸವರಾಜ ಬೊಮ್ಮಾಯಿಮನೆಯಿಂದ ಕೂಗಳತೆಯಲ್ಲಿ ಇದು ನಡೆದಿದೆ. ಇದು ನಿಮ್ಮ ಆಡಳಿತ ಎಷ್ಟು ಕುಸಿದಿದೆ ಎಂದು ಹೇಳುತ್ತಿದೆ ಎಂದು ಟೀಕಿಸಿದರು.
ಸ್ಯಾಂಟ್ರೋ ರವಿ ಯಾರೂ ಅಂತ ಗೊತ್ತೇ ಇಲ್ಲ ಎಂದ ನಿಮ್ಮ ಸಚಿವರನ್ನು ಸಮರ್ಥಿಸಲು ಈಗ ಕಾಗಕ್ಕ-ಗುಬ್ಬಕ್ಕನ ಕಥೆ ಹೇಳುತ್ತಿದ್ದೀರಿ. ಈ ಸ್ಯಾಂಟ್ರೋ ರವಿಗೆ ಕುಮಾರಕೃಪ ಅತಿಥಿ ಗೃಹದಲ್ಲಿ ತಿಂಗಳುಗಳ ಕಾಲ ವಾಸವಿರುವ ವ್ಯವಸ್ಥೆ ಕಲ್ಪಿಸಿದ್ದು ಯಾರು? ಮುಖ್ಯಮಂತ್ರಿ ಬೊಮ್ಮಾಯಿ ಮನೆಯಿಂದ ಕೂಗಳತೆಯಲ್ಲಿ ಇದು ನಡೆದಿದೆ ಎಂಬುದೇ ನಿಮ್ಮ ಆಡಳಿತ ಎಷ್ಟು ಕುಸಿದಿದೆ ಎಂದು ಹೇಳುತ್ತಿದೆ ಎಂದರು.