ಬೆಂಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಅರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಹೆಚ್.ಡಿಕೆ ಆರೋಗ್ಯ ತಪಾಸಣೆ ಮಾಡಿದ ಬಳಿಕ ಮಾಹಿತಿ ನೀಡಿದ ವೈದ್ಯರು, ಕುಮಾರಸ್ವಾಮಿ ಆರೋಗ್ಯ ಸುಧಾರಿಸಿದೆ. ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಎಂದಿನಂತೆ ಇಂದು ತಮ್ಮ ದೈನಂದಿನ ಕೆಲಸ ಮುಗಿಸಿದ್ದಾರೆ. ಯಾರೂ ಆತಂಕ ಪಡುವ ಅವಶ್ಯಕತೆಯಿಲ್ಲ. ಮಧ್ಯಾಹ್ನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಕುಮಾರಣ್ಣ ನಾಳೆ ಡಿಸ್ಚಾರ್ಜ್ ಆಗ್ತಾರೆ– ಸಮೃದ್ಧಿ ಮಂಜುನಾಥ್ : ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಸಮೃದ್ಧಿ ಮಂಜುನಾಥ್ ಇಂದು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರಿಗೆ ಕುಮಾರಣ್ಣ ಅವರ ಸೇವೆ ಅಗತ್ಯ ಇದೆ ಎಂದು ದೇವರು ಅವರನ್ನು ಬೇಗ ಗುಣಮುಖಗೊಳಿಸಿದ್ದಾನೆ. ನಾಳೆ ಬೆಳಗ್ಗೆ 10 ಗಂಟೆಗೆ ಕುಮಾರಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಅಗಲಿದ್ದಾರೆ. ನಾಳೆ ಮಾಧ್ಯಮಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ ಎಂದರು.
ಸುಮಾರು 3 ಘಂಟೆಗಳ ಕಾಲ ಕುಮಾರಣ್ಣ ಜೊತೆ ಚರ್ಚೆ ಮಾಡಿದ್ದೇನೆ. ಪ್ರಜ್ವಲ್ ರೇವಣ್ಣ ಅನರ್ಹ ವಿಚಾರ ಕುಮಾರಣ್ಣನವರಿಗೆ ಗೊತ್ತಿಲ್ಲ. ಎ.ಮಂಜು ಬೇರೆ ಪಕ್ಷದಲ್ಲಿದ್ದಾಗ ಕೇಸ್ ಹಾಕಿರುವುದು ನಿಜ. ಆದರೆ, ಅವರು ಈಗ ನಮ್ಮ ಪಕ್ಷದಲ್ಲಿದ್ದಾರೆ. ಕುಮಾರಣ್ಣನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೇಲೆ ಈ ಬಗ್ಗೆ ಕೂತು ಮಾತನಾಡುತ್ತಾರೆ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.