ಬೆಂಗಳೂರು: ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಮುನಿಸಿಕೊಂಡಿದ್ದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ರಾಜೀನಾಮೆ ಪತ್ರ ಕಳುಹಿಸಿಕೊಟ್ಟಿರುವ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಪಕ್ಷದಲ್ಲಿನ ವಿವಿಧ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರವನ್ನು ನೀಡಿದ್ದಾರೆ.


2019ರಲ್ಲಿ ಕುಮಟಳ್ಳಿ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಮಟಳ್ಳಿ ಗೆಲುವಿಗೆ ಶ್ರಮಿಸಿದ್ದರು. ಆದರೆ ಈಗ ಪಕ್ಷದ ಟಿಕೆಟ್ ಎರಡನೇ ಬಾರಿ ನಿರಾಕರಣೆಯಾದ ಕಾರಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ಕ್ಷೇತ್ರದ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಸಮ್ಮತಿ ನೀಡಿದ್ದು, ಇನ್ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರುತ್ತಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದಿದ್ದರು. ಬಿಜೆಪಿ ನನಗೆ ಕೊಟ್ಟ ಮಾತು ತಪ್ಪಿದೆ, ನನಗೆ ಎಂಎಲ್‌ಸಿ ಮಾಡು ಅಂದವರು ಯಾರು? ಡಿಸಿಎಂ ಮಾಡಿ ಅಂದವರು ಯಾರು? ಡಿಸಿಎಂ ತೆಗಿ ಅಂದವರು ಯಾರು? ಡಿಸಿಎಂ ಸ್ಥಾನ ಕೊಟ್ಟು ಕಿತ್ತುಕೊಂಡಾಗ ನೋವಾಯ್ತು ಎಂದಿದ್ದರು.