ಬೆಂಗಳೂರು: ಟಿಕೆಟ್ ಕೈ ತಪ್ಪಿದ್ದರಿಂದ ಲಕ್ಷ್ಮಣ ಸವದಿ ಇಂದು ಬಿಜೆಪಿಗೆ , ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜಕೀಯವಾಗಿ ಸಂಕಷ್ಟದಲ್ಲಿದ್ದೇನೆ. ಕಾಂಗ್ರೆಸ್, ಜೆಡಿಎಸ್ ನವರು ನನ್ನನ್ನು ಸಂಪರ್ಕಿಸುತ್ತಿದ್ದಾರೆ. ಯಾವ ಪಕ್ಷ ಸೇರ್ಪಡೆ ಆಗಬೇಕು ಎಂದು ನಿಮ್ಮ ಅಭಿಪ್ರಾಯದ ಮೇಲೆ ನಿಂತಿದೆ. ಬಿಜೆಪಿ ಬಿಡುತ್ತೇನೆ ಎಂದು ಬೆಂಬಲಿಗರ ಸಭೆಯಲ್ಲಿ ಸವದಿ ತಿಳಿಸಿದ್ದರು.
ಬೆಂಗಳೂರಿಗೆ ಹೋಗಿ ನನ್ನ ಮುಂದಿನ ನಿರ್ಧಾರದ ಬಗ್ಗೆ ತಿಳಿಸುತ್ತೇನೆ , ವಿಧಾನ ಪರಿಷತ್ ಸ್ಥಾನ ಮತ್ತು ಪಕ್ಷಕ್ಕೆ ರಾಜೀನಾಮೆ ಕೊಡಬೇಕು. ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು. ಬಳಿಕ ಏನು ಮಾಡಬೇಕು ಎನ್ನುವ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.
ಕಾಂಗ್ರೆಸ್, ಜೆಡಿಎಸ್ ನಿಂದ ಆಹ್ವಾನವಿದೆ, ಸಂಜೆಯೊಳಗಡೆ ಒಂದು ತೀರ್ಮಾನಕ್ಕೆ ಬರ್ತಿನಿ. ಏ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಸುತ್ತೇನೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ಬಿ.ಎಲ್.ಸಂತೋಷ ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ, ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆ ಎಂದು ಹೇಳಿದರು. ಅಥಣಿ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದ್ದು, ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.