ಚಿಕ್ಕೋಡಿ: ನನ್ನ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ 127 ರಿಂದ 130 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಕೈ ಅಭ್ಯರ್ಥಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸೇರಿದ ಮೇಲೆ ಈ ಬಾರಿ ಉತ್ಸಾಹ ಹುಮ್ಮಸ್ಸಿನಿಂದ ಚುನಾವಣೆ ಎದುರಿಸಿದ್ದೇನೆ. ಕಾಂಗ್ರೆಸ್ ವೋಟ್ ಬ್ಯಾಂಕ್ ಜೊತೆಗೆ ಬಿಜೆಪಿ ತೊರೆದು ನನ್ನ ಬೆಂಬಲಿಗರು ಬಂದಿದ್ದಾರೆ ಎಂದರು. ನನಗೆ 1 ಲಕ್ಷ 20 ಸಾವಿರ ಮತಗಳು ಬರುವ ನಿರೀಕ್ಷೆ ಇದೆ. 40 ಸಾವಿರಕ್ಕೂ ಅಧಿಕ ಮತಗಳ ನಾನು ಅಂತರದಿಂದ ಗೆಲ್ಲುತ್ತೇನೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಂ ಯಾರಾಗಬೇಕು ಎನ್ನುವದನ್ನು ಹೈ ಕಮಾಂಡ ತೀರ್ಮಾನ ಮಾಡುತ್ತೆ ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. 5 ಗ್ಯಾರಂಟಿ ಯೋಜನೆಗಳಿಂದ ಬಡವರು, ಕಾರ್ಮಿಕರಿಗೆ ಬಹಳಷ್ಟು ಆಶಾ ಕಿರಣ ಮೂಡಿದೆ, ಬಡವರು ಕಾರ್ಮಿಕರು ಹಾಗೂ ಮಧ್ಯಮ ವರ್ಗದವರು ಜನಪ್ರಿಯ ಯೋಜನೆಗಳಿಂದ ಕಾಂಗ್ರೆಸ್ ನ್ನ ಬೆಂಬಲಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಪಕ್ಷದಲ್ಲಿ ಪ್ರಾಮಾಣಿಕರು ನಿಷ್ಠಾವಂತರಿಗೆ ನಿರ್ಲಕ್ಷ್ಯ ಆಗಿದೆ. ವ್ಯಾಪಾರೀಕರಣದಿಂದ ಬಿಜೆಪಿ ಪಕ್ಷಕ್ಕೆ ಬಹಳ ದೊಡ್ಡ ಹಾನಿಯಾಗಿದೆ. ಕಾಂಗ್ರೆಸ್ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.