ಬೆಂಗಳೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಂಡಾಯವೆದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.
ಯಾವುದೇ ಷರತ್ತಿಲ್ಲದೇ ಕಾಂಗ್ರೆಸ್ ಸೇರಲಿದ್ದಾರೆ. ಇಂದು ಸಂಜೆ ಸವದಿ 4.30 ಕ್ಕೆ ಇಂದು ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ, ಸವದಿ ಜೊತೆಗೆ ಅನಿಲ್ ಬೆನಕೆಯೂ ಕಾಂಗ್ರೆಸ್ ಸೇರುತ್ತಿದ್ದಾರೆ, ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ. ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಅಂದಹಾಗೆ ಅಥಣಿ ಟಿಕೆಟ್ ಸಿಗದ ನೋವಿನಲ್ಲಿರುವ ಸವದಿ ಪಕ್ಷಕ್ಕೆ ಬಂದ್ರೆ ಸ್ವಾಗತಿಸುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ. ಇನ್ನೂ ಸವದಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಬೇಸರಿಸಿದ್ದಾರೆ.