ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿಜಯನಗರದ ಮರಾಠಿ ಶಾಲೆಯೊಂದರಲ್ಲಿ ತಮ್ಮ ಮತ ಚಲಾಯಿಸಿದರು.
ಲಕ್ಷ್ಮೀ ಮತಗಟ್ಟೆಗೆ ಕುಟುಂಬದ ಸದಸ್ಯರೊಂದಿಗೆ ಮತ ಚಲಾಯಿಸಲು ಬಂದಾಗ ಕೈಯಲ್ಲಿ ಅವರ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನ ಫೋಟೋ ಇತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಸಹೋದರ ಮತ್ತು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪುತ್ರ ಮೃನಾಲ್, ಸೊಸೆ ಹಿತಾ ಹಾಗೂ ಕುಟುಂಬ ಸದಸ್ಯರ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ.