Monday, December 4, 2023
spot_img
- Advertisement -spot_img

ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಲಕ್ಷ್ಮಣ್‌ ಸವದಿ ಭೇಟಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಅಥಣಿ ಶಾಸಕ‌ ಲಕ್ಷ್ಮಣ ಸವದಿ ಭೇಟಿ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಭೇಟಿ ನೀಡಿದ ವೇಳೆ ಮಕ್ಕಳೊಂದಿಗೆ ಊಟ ಮಾಡಿದರು.

ಅನಂತರ ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಮೆನು ಪ್ರಕಾರ ಉಪಹಾರ, ಊಟ ನೀಡುತ್ತಿದ್ದಾರೆಯೇ? ಇಲ್ಲಿ ಏನಾದರೂ ಸಮಸ್ಯೆಗಳಿವೆಯೇ? ಎನ್ನುವುದನ್ನು ವಿದ್ಯಾರ್ಥಿಗಳಿಗೆ ಪ್ರಶ್ನೆ ಮಾಡಿ ಕೇಳಿ ತಿಳಿದುಕೊಂಡರು.

ಮುರಗುಂಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ‌ ಶಾಲೆಗೆ ಅಥಣಿ ಶಾಸಕ‌ ಲಕ್ಷ್ಮಣ ಸವದಿ ಶಾಲಾ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles