ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಖಂಡಿತ ಬೊಮ್ಮಾಯಿ ಅವರ ಸಲಹೆಯನ್ನ ಗಂಭೀರವಾಗಿ ಪರಿಗಣಿಸುತ್ತೇನೆ. ಅದಕ್ಕೂ ಮೊದಲು ನಾವು ಕೋರ್ಟ್ ಆದೇಶವನ್ನು ತಳ್ಳಿಹಾಕಲು ಆಗುವುದಿಲ್ಲ. ಆದರೆ, ಅವರು ಮೊದಲು ತಮ್ಮ ಪ್ರಭಾವ ಬಳಸಿ ರಾಜ್ಯದ ಹಿತ ಕಾಪಾಡಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾವೇರಿ ನೀರಿನ ವಿಚಾರವಾಗಿ ನಾವು ಪ್ರಧಾನಿ ಮೋದಿ ಅವರ ಹತ್ತಿರ ಮಾತನಾಡಬೇಕು. ರಾಜ್ಯದ ಹಿತ ಕಾಪಾಡಲು ಎಲ್ಲರೂ ಸಹಕರಿಸಬೇಕು. ನಾವು ನಮ್ಮ ಕಾನೂನು ಹೋರಾಟ ಮಾಡುತ್ತೇವೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಬಗ್ಗೆ ಸಂಸತ್‌ನಲ್ಲಿ ಮಾತನಾಡಿದ್ದಾರೆ. ಬೊಮ್ಮಾಯಿ ಅವರು ಕೂಡ ಹಿಂದೆ ನೀರಾವರಿ ಸಚಿವರು ಹಾಗೂ ಸಿಎಂ ಆಗಿದ್ದವರು. ಅವರು ನೇಮಕ ಮಾಡಿರುವ ಕಾನೂನು ತಜ್ಞರೇ ಈಗ ಇರುವುದು. ಈಗ ನಾವು ತಜ್ಞರ ಮಾತು ಕೇಳಬೇಕೋ ಅಥವಾ ಬೊಮ್ಮಾಯಿ ಅವರ ಮಾತು ಕೇಳ್ಬೇಕೊ? ಅದಕ್ಕೂ ಮೊದಲು ಬೊಮ್ಮಾಯಿಯವರು ತಮ್ಮ ಪ್ರಭಾವ ಉಪಯೋಗಿಸಿಕೊಂಡು ರಾಜ್ಯದ ಹಿತ ಕಾಪಾಡಲಿ’ ಎಂದು ಹೇಳಿದರು.
ಇದನ್ನೂ ಓದಿ; ಪ್ರಾಧಿಕಾರದ ಆದೇಶಕ್ಕೆ ಮಣಿದ ರಾಜ್ಯ ಸರ್ಕಾರ; ರಾತ್ರೋರಾತ್ರಿ ತಮಿಳುನಾಡಿಗೆ ನೀರು!
ದೆಹಲಿಯತ್ತ ಡಿಕೆಶಿ ಪ್ರಯಾಣ:
‘ಕಾವೇರಿ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಚರ್ಚಿಸಲು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಇಂದು ಮಧ್ಯಾಹ್ನದ ವೇಳೆಗೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಕಾವೇರಿ ನೀರು ವಿಚಾರವಾಗಿ, ತಜ್ಞರ ಜೊತೆ ಮಾತುಕತೆ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.