ಬೆಂಗಳೂರು: ಮೋದಿ ಅವ್ರು ರೋಡ್ ಶೋ ಆದ್ರೂ ಮಾಡ್ಲಿ, ಸಮಾವೇಶ ಆದ್ರೂ ಮಾಡ್ಲಿ ನಮ್ಮದೇನು ಅಭ್ಯಂತರವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕವಿ ದಿ. ಡಾ. ಸಿದ್ದಲಿಂಗಯ್ಯ ರವರ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಮೋದಿ ಅವರು ಬೆಂಗಳೂರಿಗೆ ಬರುವುದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದಿದ್ದಾರೆ.
ಅಂಬಾನಿ -ಅದಾನಿ ಜೇಬಿಗೆ ದುಡ್ಡು
ಕಾರ್ಯಕ್ರಮ ಉದ್ದೇಶಿಸಿ ಭಾಷಣ ಆರಂಭಿಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ರು. ಅಂಬಾನಿ-ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಇಡಿ ದೇಶ ಪರಿತಪಿಸುವಂತಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಶ್ರಮಿಕ ವರ್ಗದವರ ಜೇಬಿಗೆ ಹಣ ಹಾಕುವ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ: ʼಮೋದಿ ಮತ್ತೆ ಪ್ರಧಾನಿಯಾಗುವ ಕಾಲ ಹತ್ತಿರ ಬರ್ತಿದೆʼ
ಸಿದ್ದಲಿಂಗಯ್ಯ ಅವರ ಆಶಯಗಳನ್ನು ಬದುಕಿನಲ್ಲಿ ಇಟ್ಟುಕೊಂಡವರಿಗೆ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಈ ಬೆದರಿಕೆ ಪತ್ರ ಬರೆಯುವವರನ್ನು ಬೆಂಬಲಿಸುವವರ ಕೈಗೆ ಅಧಿಕಾರ ಕೊಟ್ಟಿದ್ದೇವೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.